ಇತ್ತೀಚಿನ ಸುದ್ದಿ
ಕೊಪ್ಪ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು: ನಿವೃತ್ತ ನ್ಯಾಯಾಧೀಶರಿಂದ ತನಿಖೆ
09/07/2025, 17:23

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕೊಪ್ಪ ಪಟ್ಟಣದ ಮೊರಾರ್ಜಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಾಧೀಶರಿಂದ ತನಿಖೆ ಆರಂಭಗೊಂಡಿದ್ದು, ವಸತಿ ಶಾಲೆಯ ಪ್ರಿನ್ಸಿಪಾಲ್ ಹಾಗೂ ವಾರ್ಡನ್ ಅಮಾನತು ಮಾಡಲಾಗಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ
ವಸತಿ ಶಾಲೆಯ ಪ್ರಿನ್ಸಿಪಾಲ್ ರಜನಿ ಹಾಗೂ ವಾರ್ಡನ್ ಸುಂದರ್ ನಾಯಕ್ ಅವರನ್ನು ಅಮಾನತು ಮಾಡಿದೆ.
ಕ್ರೈಸ್ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಅವರು ಈ ಅಮಾನತು ಆದೇಶ ಹೊರಡಿಸಿದ್ದಾರೆ.
2023 ಜುಲೈ 27ರಂದು ಅಮೂಲ್ಯ, 2025 ಜೂನ್ 29ರಂದು ಶಮಿತಾ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು.
ಆತ್ಮಹತ್ಯೆ ಮಾಡಿಕೊಂಡ ಇಬ್ಬರೂ ವಿದ್ಯಾರ್ಥಿನಿಯರು 9ನೇ ತರಗತಿಯವರು ಆಗಿದ್ದರು. ಇಬ್ಬರು ವಿದ್ಯಾರ್ಥಿನಿಯರು ಒಂದೇ ರೂಂನ ಒಂದೇ ಕಬ್ಬಿಣಕ್ಕೆ ಒಂದೇ ಶೈಲಿಯಲ್ಲಿ ನೇಣು ಹಾಕಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಉನ್ನತ ತನಿಖೆ ನಡೆಸುವಂತೆ ಸ್ಥಳೀಯರು, ಸಾರ್ವಜನಿಕರು ಆಗ್ರಹಿಸಿದ್ದರು
ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಆದೇಶದ ಬೆನ್ನಲ್ಲೇ ಅಮಾನತು ಆದೇಶ ಹೊರಡಿಸಲಾಗಿದೆ. ನಿವೃತ್ತ ನ್ಯಾಯಾಧೀಶೆ ಶೋಭಾ ನೇತೃತ್ವದಲ್ಲಿ ತನಿಖೆ ನಡೆಯಲಿದೆ.