12:28 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ ಸಚಿವರು

09/07/2025, 19:20

ಮಂಗಳೂರು(reporterkarnataka.com): ಮಂಗಳೂರು ವಿಭಾಗದಲ್ಲಿ ಪೆಟ್ರೋಲಿಯಂ ಮತ್ತು ತೈಲ ಕಂಪನಿಗಳು, ರಾಸಾಯನಿಕ ಕೈಗಾರಿಕೆಗಳು ಮತ್ತು ಬಂದರು ಇರುವುದರಿಂದ ಇದಕ್ಕೆ ಸಂಬಂಧಿತ ದುರಂತಗಳ ನಿರ್ವಹಣೆಗಾಗಿ ಅಗ್ನಿಶಾಮಕ ಇಲಾಖೆಯನ್ನು ಸಶಕ್ತಗೊಳಿಸಲಾಗಿದೆ ಎಂದು
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಅವರು ಬುಧವಾರ ಮಂಗಳೂರಿನ ಹೊರವಲಯದ ಪಜೀರಿನಲ್ಲಿ ಉಳ್ಳಾಲ ತಾಲೂಕು ಅಗ್ನಿಶಾಮಕ ಠಾಣೆಯ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಇತ್ತೀಚೆಗೆ ಭೂಕುಸಿತದಂತಹ ಪ್ರಾಕೃತಿಕ ವಿಕೋಪಗಳು ಹಲವೆಡೆ ಸಂಭವಿಸಿದ್ದು ಇದನ್ನು ನಿರ್ವಹಿಸಲು ಅಗ್ನಿಶಾಮಕ ಇಲಾಖೆಯನ್ನು ಪರಿಣಾಮಕಾರಿಯಾಗಿ ಸಜ್ಜುಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.
ಮುಲ್ಕಿ ಮತ್ತು ಕಡಬ ತಾಲೂಕಿಗೆ ಅಗ್ನಿಶಾಮಕ ಠಾಣೆಯನ್ನು ಮಂಜೂರುಗೊಳಿಸಿದ್ದು, ಶೀಘ್ರದಲ್ಲಿ ಇದಕ್ಕೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದರು.
ಅಗ್ನಿಶಾಮಕ ಇಲಾಖೆಗೆ ತುರ್ತು ಸಂದರ್ಭ ನಿರ್ವಹಣೆಗೆ ರೂ. 50 ಕೋಟಿ ವೆಚ್ಚದಲ್ಲಿ ಹೊಸ ವಾಹನಗಳ ಖರೀದಿಗೆ ಮಂಜೂರಾತಿ ನೀಡಲಾಗಿದೆ. 15 ವರ್ಷ ದಾಟಿದ ವಾಹನಗಳನ್ನು ಬಳಸುವಂತಿಲ್ಲ ಎಂಬ ನಿಯಮದಿಂದ ಅಗ್ನಿಶಾಮಕ ಇಲಾಖೆಯ ಹಲವು ವಾಹನಗಳು ನಿರುಪಯುಕ್ತವಾಗಿತ್ತು. ಇದರಿಂದ ಹೊಸ ವಾಹನಗಳ ಖರೀದಿಸಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಇಲಾಖೆಗೆ ಹೊಸ ಅಗ್ನಿಶಾಮಕ ವಾಹನಗಳ ಖರೀದಿಗೆ ರೂ. 50 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಇಲಾಖೆಗೆ ಅತೀ ಉದ್ದದ 90 ಮೀ. ಎತ್ತರದ ಏಣಿಯನ್ನು ಖರೀದಿಸಲಾಗಿದೆ. ಇದರಿಂದ ಎತ್ತರದ ಕಟ್ಟಡಗಳಲ್ಲಿ ಉಂಟಾಗುವ ದುರಂತಗಳ ಸ್ಥಳಗಳಿಗೆ ತುರ್ತಾಗಿ ತಲುಪಬಹುದಾಗಿದೆ. ಇದಲ್ಲದೆ ಆಧುನೀಕರಣ ಅಭಿವೃದ್ಧಿಯಿಂದ ಎದುರಾಗುವ ದುರಂತಗಳ ನಿರ್ವಹಣೆಗೆ ಸುಲಭವಾಗಬಹುದು ಎಂದು ಹೇಳಿದರು.
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಉಳ್ಳಾಲ ನೂತನ ಅಗ್ನಿಶಾಮಕ ಠಾಣೆಯಿಂದ ಈ ಭಾಗದ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಲಾಗಿದೆ. ಇದನ್ನು ಮಾದರಿ ಅಗ್ನಿಶಾಮಕ ಠಾಣೆಯನ್ನಾಗಿ ಮಾಡಲಾಗುವುದು ಎಂದು ಹೇಳಿದರು.


ಉಳ್ಳಾಲ ಮತ್ತು ಕೋಣಾಜೆ ಪೊಲೀಸ್ ಠಾಣೆ ಕಟ್ಟಡವನ್ನು ನೂತನವಾಗಿ ಸುಸಜ್ಜಿತವಾಗಿ ನಿರ್ಮಿಸಲಾಗುವುದು ಎಂದು ಅವರು ತಿಳಿಸಿದರು.
ಮುಡಾ ಅಧ್ಯಕ್ಷ ಸದಾಶಿವ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಅಗ್ನಿಶಾಮಕ ಉಪ ನಿರ್ದೇಶಕ ಈಶ್ವರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ. ತಿರುಮಲೇಶ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು