4:39 PM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ…

ಇತ್ತೀಚಿನ ಸುದ್ದಿ

Mangaluru | ಅಪಘಾತಕ್ಕೀಡಾದ ಕಾರು ಬಿಡಿಸಲು 50 ಸಾವಿರ ರೂ. ಲoಚದ ಬೇಡಿಕೆ: ಪೊಲೀಸ್ ಹೆಡ್‌ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ

10/07/2025, 21:44

ಮಂಗಳೂರು(reporterkarnataka.com): ಲಂಚ ಪಡೆಯುತ್ತಿದ್ದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಗರದಲ್ಲಿ ನಡೆದಿದೆ.
ಕಾರು-ಸ್ಕೂಟರ್ ಅಪಘಾತ ಪ್ರಕರಣದಲ್ಲಿ ಕಾರನ್ನು ಠಾಣೆಯಿಂದ ಬಿಡಿಸಿಕೊಳ್ಳಲು ಲಂಚ 50 ಸಾವಿರ ರೂ.ಲಂಚಕ್ಕೆ ಬೇಡಿಕೆಯಿಟ್ಟಿದ್ದ ಹೆಡ್‌ಕಾನ್ಸ್ಟೇಬಲ್ ತಸ್ಲಿಂ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಘಟನೆ ವಿವರ: ನಗರದ ನಂತೂರು ಸರ್ಕಲ್‌ನಲ್ಲಿ ನಡೆದ ಅಪಘಾತದ ಬಗ್ಗೆ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ತಸ್ಲಿಂ, ಕಾರು, ಕಾರಿನ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ತಂದು ಕೊಡುವಂತೆ ಸೂಚಿಸಿದ್ದು, ಅದರಂತೆ ಕಾರಿನ ಮಾಲಕರು ಎಲ್ಲವನ್ನೂ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಬಳಿಕ ತನ್ನ ಕಾರನ್ನು ಪೊಲೀಸ್ ಠಾಣೆಯಿಂದ ಬಿಡಿಸಿಕೊಳ್ಳಲು ಹೋದಾಗ ಹೆಡ್ ಕಾನ್ಸ್ಟೇಬಲ್ ತಸ್ಲಿಂ 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.
ಈ ಸಂಬಂಧ ಕಾರಿನ ಮಾಲಕರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಕದ್ರಿ ಠಾಣೆಯ ಇಬ್ಬರು ಹೆಡ್ ಕಾನ್ಸ್‌ಸ್ಟೇಬಲ್‌ಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಇಂದು ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ತಸ್ಲಿಂನನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು