7:48 PM Saturday8 - November 2025
ಬ್ರೇಕಿಂಗ್ ನ್ಯೂಸ್
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌…

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು: ಶಾಸಕ ಪೊನ್ನಣ್ಣ

11/07/2025, 17:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಮುಂದಿನ 3 ತಿಂಗಳಲ್ಲಿ ಜಿಲ್ಲೆಯ ಅದಿವಾಸಿಗಳಿಗೆ ಮುಖ್ಮಮಂತ್ರಿಗಳಿಂದ ಹಕ್ಕು ಪತ್ರ ವಿತರಣೆಯ ಮಹತ್ವದ ತೀಮಾ೯ನ ಕೈ ಗೊಳ್ಳಲಾಗಿದೆ.
ಎಂದು ಶಾಸಕ ಎ. ಎಸ್. ಪೊನ್ನಣ್ಣ ಹೇಳಿದರು.
ಮಡಿಕೇರಿಯಲ್ಲಿ ನಡೆದ ಸುದ್ದಿ ಗೋಷ್ಟಿಯಲ್ಲಿ ಮಾಹಿತಿ ನೀಡಿದ ಶಾಸಕ ಪೊನ್ನಣ್ಣ ಅವರು, ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ ತಾಲೂಕು ವ್ಯಾಪ್ತಿಯಲ್ಲಿ ನಿವೇಶನ ರಹಿತ ಆದಿವಾಸಿಗಳನ್ನು ಸಮೀಕ್ಷೆ ಮೂಲಕ ಗುರುತಿಸಲಾಗಿದ್ದು ಸುಮಾರು 60 ಎಕ್ರೆ ಸಕಾ೯ರಿ ಜಾಗದಲ್ಲಿ ನಿವೇಶನ ರಹಿತ ಆದಿವಾಸಿಗಳಿಗೆ ನಿವೇಶನದ ಹಕ್ಕು ಪತ್ರ ನೀಡಿಕೆಗೆ ನಿಧಾ೯ರ ಮಾಡಲಾಗಿದೆ.
ಮುಂದಿನ ದಿನಗಳಲ್ಲಿ ಸಿಕ್ಕಸಿಕ್ಕಲ್ಲಿ ಶೆಡ್ ನಿಮಿ೯ಸಿ ಮನೆ ನಿರ್ಮಿಸಬೇಡಿ ಎಂದು ಪೊನ್ನಣ್ಣ ಮನವಿ ಮಾಡಿದರು.
ನಾಡಿನಲ್ಲಿ ಕೖಷಿ ಜಮೀನು ನಾಶ ಪಡಿಸುತ್ತಿರುವ ಆನೆಗಳನ್ನು ಕಾಡಿಗಟ್ಟಲು ಮಹತ್ವದ ಕ್ರಮಕ್ಕೆ ಅರಣ್ಯ ಇಲಾಖೆ ಮುಂದಾಗಿದ್ದು,ಈಗಾಗಲೇ 4 ಹುಲಿಗಳನ್ನು ಸೆರೆ ಹಿಡಿಯಲು ಸಕಾ೯ರ ಅನುಮತಿ ನೀಡಿದೆ.
ಹೀಗಿದ್ದರೂ ಹುಲಿಗಳನ್ನು ಗುರುತಿಸಿ ಸೆರೆಹಿಡಿಯಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಹುಲಿ ಸೆರೆಗೆ ಆದೇಶ ನೀಡಲಾಗಿದೆ. ಗುರುವಾರ ಅರಣ್ಯ ಇಲಾಖೆಯ ಅಧಿಕಾರಿ ವಗ೯ದೊಂದಿಗೆ ಮಹತ್ವದ ಸಭೆ ನಡೆಸಿ ವಿರಾಜಪೇಟೆ ಕ್ಷೇತ್ರದಲ್ಲಿ ಆನೆ, ಹುಲಿ ದಾಂಧಲೆಗೆ ಶಾಶ್ವತ ಕಡಿವಾಣ ಹಾಕುವ ನಿಟ್ಟಿನಲ್ಲಿ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತೀರ ಧಮ೯ಜ ಉತ್ತಪ್ಪ, ಜಿಪಂ ಮಾಜಿ ಅಧ್ಯಕ್ಷ ಪಿ.ಕೆ. ಪೊನ್ನಪ್ಪ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು