ಇತ್ತೀಚಿನ ಸುದ್ದಿ
ಧರ್ಮಸ್ಥಳ ಸರಣಿ ಹತ್ಯೆ?: ಶವಗಳ ಹೂತು ಹಾಕಿದ್ದೇನೆ ಎಂದು ದೂರು ನೀಡಿದಾತ ಬೆಳ್ತಂಗಡಿ ಕೋರ್ಟ್ ಗೆ ಹಾಜರು
11/07/2025, 19:37

ಬೆಳ್ತಂಗಡಿ(reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಹಾಗೂ ಬೇರೆ ಬೇರೆ ಕಾರಣಗಳಿಗೆ ಕೊಲೆಯಾದವರನ್ನು ಹೂತು ಹಾಕಿದ್ದೇನೆ ಎಂದು ತಪ್ಪೊಪ್ಪಿಕೊಂಡಿರುವ ದೂರುದಾರನನ್ನು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಹಾಜರುಪಡಿಸಲಾಯಿತು.
ಧರ್ಮಸ್ಥಳದಲ್ಲಿ ನಡೆದ ಸರಣಿ ಕೊಲೆಗಳ ಬಗ್ಗೆ ತನ್ನಲ್ಲಿ ಮಾಹಿತಿ ಇದೆ. ಆ ಶವಗಳನ್ನು ನಾನೇ ಹೂತು ಹಾಕಿದ್ದೇನೆ. ಯಾರು ಈ ಕೊಲೆಗಳನ್ನು ನಡೆಸಿದ್ದರು ಎನ್ನುವುದರ ಬಗ್ಗೆ ಮಾಹಿತಿ ನೀಡುವುದಾಗಿ ಅನಾಮಧೇಯ ವ್ಯಕ್ತಿಯೊಬ್ಬರು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಈಗಾಗಲೇ ಎಫ್ ಐಆರ್ ದಾಖಲಾಗಿತ್ತು.
ಹತ್ಯೆಗೊಳಗಾದವರನ್ನು ಹೂತು ಹಾಕಿದ್ದೇನೆ ಎಂದು ದೂರಿನಲ್ಲಿ ತಪ್ಪೊಪ್ಪಿಕೊಂಡಿರುವ ವ್ಯಕ್ತಿಯನ್ನು ಇಂದು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ದೂರುದಾರನ ಗುರುತು ಸಿಗದಂತೆ ಕಪ್ಪು ಡ್ರೆಸ್ ಹಾಗೂ ಮುಖಕ್ಕೆ ಕಪ್ಪು ಕವರ್ ಹಾಕಲಾಗಿತ್ತು.