1:47 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ರೋಹನ್ ಕಾರ್ಪೊರೇಷನ್ ಅಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಶಾರೂಖ್‌ ಖಾನ್ ಘೋಷಣೆ: ಮಂಗಳೂರಿನಲ್ಲಿ ಕಾರ್ಯಕ್ರಮ

13/07/2025, 16:10

ಮಂಗಳೂರು(reporterkarnataka.com): ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ, ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್‌ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಜುಲೈ 12ರಂದು ಘೋಷಣೆ ಮಾಡಿತು.
ಈ ಬಹು ನಿರೀಕ್ಷಿತ ಕಾರ್ಯಕ್ರಮ ಮಂಗಳೂರಿನ ಬಿಜೈ ಭಾರತ್ ಮಾಲ್‌ನಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ಮಾಧ್ಯಮ ಪ್ರತಿನಿಧಿಗಳು, ಸಾಮಾಜಿಕ ಮಾಧ್ಯಮ ಪ್ರಭಾವಿಗಳು, ಮತ್ತು ಸಿನಿಮಾ ಜಗತ್ತಿನ ತಾರೆಗಳು ಭಾಗವಹಿಸಿದ್ದರು.
ಈ ಘೋಷಣೆ ವಿಶೇಷ ಏಕೆಂದರೆ – ಇದು ಕರ್ನಾಟಕದಲ್ಲಿ ಮೊದಲ ಬಾರಿಗೆ ಶಾರೂಖ್‌ ಖಾನ್ ಅವರು ಯಾವುದೇ ಬ್ರಾಂಡ್‌ಗೆ ಅಂಬಾಸಿಡರ್ ಆಗಿರುವುದು. ಈ ಮೂಲಕ ರೋಹನ್ ಕಾರ್ಪೊರೇಷನ್ ಮಂಗಳೂರು ನಗರವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ.
ಸಮಾರಂಭದ ಪ್ರಮುಖ ಆಕರ್ಷಣೆ ಎಂದರೆ, ಬೃಹತ್ ಪರದೆಯ ಮೇಲೆ ಪ್ರದರ್ಶಿಸಲಾದ ಅಧಿಕೃತ ಬ್ರಾಂಡ್ ಅಂಬಾಸಿಡರ್ ವಿಡಿಯೋ (AV).
ಈ ವಿಡಿಯೋದಲ್ಲಿ ರೋಹನ್ ಕಾರ್ಪೊರೇಷನ್‌ನ ಸ್ಫೂರ್ತಿದಾಯಕ ಪಯಣ ಮತ್ತು ಶಾರೂಖ್‌ ಖಾನ್ ಅವರ ಶ್ರಮ ಮತ್ತು ವ್ಯಕ್ತಿತ್ವ ತುಂಬಿದ ಯಶೋಗಾಥೆ ಅದ್ಭುತವಾಗಿ ಪ್ರಸ್ತುತಗೊಂಡಿತ್ತು.
ಸಂಸ್ಥಾಪಕರಾದ ಡಾ. ರೋಹನ್ ಮೊಂತೇರೊ ಅವರು ಈ ಸಂದರ್ಭದಲ್ಲಿ ಮಾತನಾಡಿ “ಶಾರೂಖ್‌ ಖಾನ್ ಅವರಂತಹ ಪ್ರಭಾವಿ ವ್ಯಕ್ತಿತ್ವ ನಮ್ಮ ಜೊತೆಗೆ ಇರುವುದರಿಂದ, ನಮ್ಮ ಯಶಸ್ಸನ್ನು ಇನ್ನೂ ಎತ್ತರಕ್ಕೆ ವಿಸ್ತರಿಸುವಲ್ಲಿ ಹೊಸ ಆತ್ಮವಿಶ್ವಾಸ ಬಂದಿದೆ. ಇದು ಶಕ್ತಿಯುತ ಸಹಭಾಗಿತ್ವದ ಹೊಸ ಅಧ್ಯಾಯದ ಪ್ರಾರಂಭ” ಎಂದರು.
ಕಾರ್ಯಕ್ರಮವನ್ನು ಖ್ಯಾತ ನಿರೂಪಕಿ ರೀನಾ ಡಿಸೋಜಾ ಅವರು ಆಕರ್ಷಕವಾಗಿ ನಿರೂಪಿಸಿದರು.


ಈ ಘೋಷಣೆ ಕೇವಲ ಬ್ರಾಂಡ್ ಪ್ರಚಾರವಲ್ಲ, ಇದು ಮಂಗಳೂರಿನ ಅಭಿವೃದ್ಧಿಯ ಹಾದಿಯಲ್ಲಿ ಮತ್ತೊಂದು ಸಾಂದರ್ಭಿಕ ಹೆಜ್ಜೆ. 32 ವರ್ಷಗಳ ಅನುಭವ, 5000ಕ್ಕೂ ಹೆಚ್ಚು ಸಂತುಷ್ಟ ಕುಟುಂಬಗಳು, ಮತ್ತು 25ಕ್ಕೂ ಹೆಚ್ಚು ಯಶಸ್ವಿ ಯೋಜನೆಗಳೊಂದಿಗೆ, ರೋಹನ್ ಕಾರ್ಪೊರೇಷನ್ ಇದೀಗ ಒಂದು ಜಾಗತಿಕ ಹಾದಿಗೆ ಕಾಲಿಟ್ಟಿದೆ.
ರೋಹನ್ ಕಾರ್ಪೊರೇಷನ್ ಮತ್ತು ಶಾರೂಕ್ ಖಾನ್ ಅವರ ಈ ಮಹತ್ವದ ಹೆಜ್ಜೆ ಮಂಗಳೂರಿನ ಹೆಮ್ಮೆ ಮಾತ್ರವಲ್ಲ, ಕರ್ನಾಟಕದ ಗರಿಮೆಯ ಪ್ರತಿಬಿಂಬವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು