10:25 PM Monday14 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ ಕಂಬನಿ

14/07/2025, 20:28

ಬೆಂಗಳೂರು(reporterkarnataka.com): ಭಾರತೀಯ ಚಿತ್ರರಂಗದ ಖ್ಯಾತ ಚಿತ್ರನಟಿ ಬಿ.ಸರೋಜಾದೇವಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಿ.ಸರೋಜಾದೇವಿಯವರು ಕನ್ನಡ ನಾಡು ಕಂಡ ಪ್ರತಿಭಾವಂತ ಕಲಾವಿದರಾಗಿದ್ದರು. ಬಹುಭಾಷಾ ನಟಿಯಾಗಿದ್ದ ಅವರು ಅಪ್ರತಿಮ ಕಲಾವಿದರಾಗಿದ್ದು, ಅವರ ಸಾವಿನಿಂದ ಇಡೀ ಕಲಾಜಗತ್ತು ಬಡವಾಗಿದೆ. ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬವರ್ಗ ಹಾಗೂ ಅಭಿಮಾನಿ ಬಳಗಕ್ಕೆ ದು:ಖವನ್ನು ಭರಿಸುವ ಶಕ್ತಿ ತುಂಬಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ
ತಿಳಿಸಿದ್ದಾರೆ.
ಸರೋಜಾದೇವಿ ಅವರು ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು. ಅವರ ನಿಧನ ಕರ್ನಾಟಕದ ಕಲಾ‌ಕ್ಷೇತ್ರಕ್ಕೆ ಅತ್ಯಂತ ದುಃಖದ ದಿನ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,
ಅಭಿನಯ ಸರಸ್ವತಿ, ಚತುರ್ಭಾಷಾ ತಾರೆ ಪೌರಾಣಿಕ ಹಾಗೂ ಸಾಮಾಜಿಕ ಚಲನಚಿತ್ರಗಳಲ್ಲಿ ವಿಭಿನ್ನ ಪಾತ್ರವನ್ನು ಲೀಲಾಜಾಲವಾಗಿ ನಟಿಸುತ್ತಿದ್ದ ಸರೋಜಾದೇವಿ ಇನ್ನಿಲ್ಲ. ಒಂದು ಕಾಲದಲ್ಲಿ ಕನ್ನಡದ ಸೂಪರ್ ಸ್ಟಾರ್ ಆಗಿದ್ದ ಅವರು, ರಾಜಕುಮಾರ್ ಜೊತೆ, ತೆಲುಗಿನಲ್ಲಿ ಎನ್ ಟಿ ಆರ್ ಜೊತೆ, ಹಿಂದಿಯಲ್ಲಿ ದಿಲೀಪ್ ಕುಮಾರ್ ಜೊತೆ ನಟಿಸಿ ಇಡೀ ದೇಶದಲ್ಲಿ ಪ್ರಖ್ಯಾತ ನಟಿ ಆಗಿದ್ದರು.
ಕನ್ನಡದಲ್ಲಿ ಹೇಳಬೇಕಾದರೆ ಕಿತ್ತೂರು ರಾಣಿ ಚೆನ್ನಮ್ಮ ಪಾತ್ರಕ್ಕೆ ನೈಜತೆ ತಂದಿದ್ದರು. ಚೆನ್ನಮ್ಮ ಅಂದರೆ ಹೀಗಿದ್ದರು ಅಂತ ಕಲ್ಪನೆ ಮೂಡಿಸಿದ್ದರು. ಅವರ ಅಭಿನಯ, ಕಲ್ಪನೆ ಇಂದಿಗೂ ಮನಸ್ಸಿನಲ್ಲಿ ಇದೆ. ಚೆನ್ನಮ್ಮ ಬ್ರಿಟೀಷರ ವಿರುದ್ಧ ಹೇಗೆ ಹೋರಾಟ ಮಾಡಿದ್ದರು ಅಂತ ಅವರ ನಟನೆ ಮೂಲಕ ತೋರಿಸಿದ್ದರು ಎಂದರು.
ಮಲ್ಲಮ್ಮನ ಪವಾಡ ಇದೊಂದು ಮನೆಮನೆಯಲ್ಲಿ ಮನಮುಟ್ಟುವ ಚಿತ್ರವಾಗಿತ್ತು. ಲಕ್ಷ್ಮಿ ಸರಸ್ವತಿ, ಬಬ್ರುವಾಹನ, ಶ್ರೀನಿವಾಸ ಕಲ್ಯಾಣ ಸೇರಿದಂತೆ ನೂರಾರು ಚಿತ್ರಗಳಲ್ಲಿ ನಟನೆ ಮಾಡಿದ್ದರು‌. ಅಭಿನಯದ ಜೊತೆ ಗಾಂಭೀರತೆಯಲ್ಲಿ ಅಗ್ರಮಾನ್ಯರಾಗಿದ್ದರು. ಐದು ದಶಕದಿಂದ ಚಿತ್ರರಂಗದಲ್ಲಿ ನಟಿಸಿದ್ದು, ನಮ್ಮನ್ನೆಲ್ಲಾ ಅಗಲಿದ್ದಾರೆ. ಆದರೂ ಅವರ ಅಭಿನಯದ ಮೂಲಕ ನಮ್ಮ ಮನದಲ್ಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು