2:34 AM Sunday31 - August 2025
ಬ್ರೇಕಿಂಗ್ ನ್ಯೂಸ್
ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು

15/07/2025, 19:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯುತ್ ತಂತಿ ಸ್ವರ್ಶಿಸಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಾಪುರ ಗ್ರಾಮದಲ್ಲಿ ನಡೆದಿದೆ.
ಬೈರಾಪುರ ಗ್ರಾಮದ ಕೃಷಿಕರಾದ ನಾಗೇಶ್ ಗೌಡ (72) ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.
ನಾಗೇಶ್ ಗೌಡ ಅವರು ಮಂಗಳವಾರ ಮಧ್ಯಾಹ್ನ ತಮ್ಮ ಜಾನುವಾರುಗಳನ್ನು ಮೇಯಿಸಲು ತೆರಳಿದ್ದ ವೇಳೆ ಬೈರಾಪುರ ಸರ್ಕಾರಿ ಶಾಲೆಯ ಸಮೀಪ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. 11 ಕೆಂ.ವಿ. ವಿದ್ಯುತ್ ಪವರ್ ಲೈನ್ ಕಂಬದ ಬಳಿ ವಿದ್ಯುತ್ ಗ್ರೌಂಡ್ ಆಗಿದ್ದು ಘಟನೆಗೆ ಕಾರಣ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಆ ಸ್ಥಳದಲ್ಲಿ ಜಾನುವಾರುಗಳನ್ನು ಮೇಯಿಸಲು ಹೋದಾಗ ನಾಗೇಶ್ ಗೌಡರಿಗೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕು.
ನಾಗೇಶ್ ಗೌಡ ಅವರು ಗ್ರಾಮದ ಹಿರಿಯ ಕೃಷಿಕರಾಗಿದ್ದರು. ಅವರು ಪತ್ನಿ ಹಾಗೂ ಇಬ್ಬರು ಪುತ್ರರು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.
ಸ್ಥಳಕ್ಕೆ ಗೋಣಿಬೀಡು ಪೊಲೀಸರು ಮತ್ತು ಮೆಸ್ಕಾಂ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು