11:41 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಹಣಕ್ಕಾಗಿ ಪರ ಪುರುಷರ ಜತೆ ದೈಹಿಕ ಸಂಪರ್ಕ ನಡೆಸುವಂತೆ ಪತಿಯಿಂದಲೇ ಒತ್ತಾಯ: ಕಾನ್ಸ್‌ಸ್ಟೇಬಲ್ ಅಂದರ್

17/07/2025, 10:33

ಮಂಗಳೂರು(reporterkarnataka.com): ಹಣಕ್ಕಾಗಿ ಪರ ಪುರುಷರ ಜತೆ ದೈಹಿಕ ಸಂಪರ್ಕ ನಡೆಸುವಂತೆ ಸ್ವಂತ ಪತಿಯೇ ಪತ್ನಿಯನ್ನು ಒತ್ತಾಯಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆಘಾತಕ್ಕಾರಿ ವಿಷಯವೊಂದು ನಡೆದಿದೆ.
ಬೇರೆಯವರ ಜೊತೆಗಿದ್ದ ಪತ್ನಿಯ ಖಾಸಗಿ ವೀಡಿಯೋ ಸೆರೆ ಹಿಡಿದು, ಬಳಿಕ ಬ್ಲ್ಯಾಕ್‌ಮೇಲ್ ಮಾಡಿ ಹತ್ತಾರು ಜನರ ಜೊತೆ ದೈಹಿಕ ಒತ್ತಾಯಿಸುತ್ತಿದ್ದ ಘಟನೆಯೊಂದು ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಂಕನಾಡಿ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ಜು.೧೫ರಂದು ಹಾಜರಾಗಿ ಲಿಖಿತ ದೂರು ನೀಡಿದ್ದಾರೆ.
ತನ್ನ ಗಂಡನು ಹಣಕ್ಕಾಗಿ ಒತ್ತಾಯಪೂರ್ವಕವಾಗಿ ಬೇರೊಬ್ಬ ಪುರುಷನೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಮಾಡಿ, ಅದರ ವಿಡಿಯೋವನ್ನು ಚಿತ್ರೀಕರಣ ಮಾಡಿ, ಇತರರೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಇಲ್ಲವಾದಲ್ಲಿ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಯ ಬಿಡುವುದಾಗಿ ಬೆದರಿಸುತ್ತಿದ್ದ, ಸಂತ್ರಸ್ತ ಮಹಿಳೆಯು ತನಗೆ ಪರಿಚಯವಿರುವ ಕಾವೂರು ಪೊಲೀಸ್ ಠಾಣೆಯ ಕಾನ್ಸ್‌ಸ್ಟೇಬಲ್ ಚಂದ್ರನಾಯ್ಕ್‌ನಿಗೆ ಈ ಬಗ್ಗೆ ತಿಳಿಸಿದಾಗ, ಚಂದ್ರನಾಯ್ಕ್‌ನು ಸಂತ್ರಸ್ತೆಯ ಮನೆಗೆ ಹೋಗಿ ಗಂಡನ ಮೊಬೈಲ್ ಲ್ಲಿದ್ದ ಪೋಟೋ ಮತ್ತು ವಿಡಿಯೋವನ್ನು ಅಳಿಸಿದ್ದಾನೆ. ನಂತರ ಸಂತ್ರಸ್ತೆಯ ಗಂಡನ ದುಷ್ಪ್ರೇರಣೆಯಂತೆ ಚಂದ್ರನಾಯ್ಕ್‌ನು ಸಂತ್ರಸ್ತ ಮಹಿಳೆಯ ಅತ್ಯಾಚಾರ ಎಸಗಿದ್ದಾನೆ.
ಸಂತ್ರಸ್ತೆಯ ದೂರಿನ ಹಿನ್ನಲೆಯಲ್ಲಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯ ಗಂಡ ಮತ್ತು ಕಾವೂರು ಠಾಣಾ ಪೊಲೀಸ್ ಕಾನ್ಸ್‌ಸ್ಟೇಬಲ್ ಚಂದ್ರನಾಯ್ಕ್‌ನನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು