10:07 AM Friday5 - September 2025
ಬ್ರೇಕಿಂಗ್ ನ್ಯೂಸ್
ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ ಅಕ್ರಮ ಮಾದಕ ವಸ್ತು ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್: 2… ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ…

ಇತ್ತೀಚಿನ ಸುದ್ದಿ

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ ಗೆಹ್ಲೋಟ್ ಪ್ರಮಾಣ ವಚನ ಬೋಧನೆ

19/07/2025, 14:01

ಬೆಂಗಳೂರು(reporterkarnataka.com): ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ, ನ್ಯಾಯಮೂರ್ತಿ ವಿಭು ಬಖ್ರು ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ರಾಜಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.


ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ಉಚ್ಚ ನ್ಯಾಯಾಲಯದ ಹಂಗಾಮಿ ನ್ಯಾಯಾಧೀಶರಾದ ವಿ. ಕಾಮೇಶ್ವರ ರಾವ್, ಕಾನೂನು, ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ್, ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ (ಬೈರತಿ), ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ನಾಗರಾಜ ಯಾದವ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ಬಿ.ಬಿ.ಕಾವೇರಿ, ಸೇರಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಇತರೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು