12:35 PM Saturday6 - September 2025
ಬ್ರೇಕಿಂಗ್ ನ್ಯೂಸ್
ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5… ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ ಅಕ್ರಮ ಮಾದಕ ವಸ್ತು ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್: 2… ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ…

ಇತ್ತೀಚಿನ ಸುದ್ದಿ

Kodagu | ಒಂದೇ ದಿನ 4 ಪ್ರತ್ಯೇಕ ಅಪಘಾತ: ಬ್ರೇಕ್ ವೈಫಲ್ಯದಿಂದ ಮನೆಯಂಗಳಕ್ಕೆ ಉರುಳಿ ಬಿದ್ದ ಕಾರು

20/07/2025, 11:32

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗಿನಲ್ಲಿ ಒಂದೇ ದಿನ ನಾಲ್ಕು ಪ್ರತ್ಯೇಕ ಅಪಘಾತಗಳು ಸಂಭವಿಸಿದೆ. ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದ ಶಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪೊನ್ನoಪೇಟೆ ತಾಲ್ಲೂಕಿನ ಹುದಿಕೇರಿಯಲ್ಲಿ ಮನೆಯ ಅಂಗಳಕ್ಕೆ ಉರುಳಿ ಬಿದ್ದಿದೆ.


ಬೆಂಗಳೂರಿನಿಂದ ಇರ್ಪು ಜಲಪಾತ ವೀಕ್ಷಿಸಿ ಕೇರಳದ ವೈನಾಡುಗೆ ತೆರಳುತ್ತಿದ್ದ ಈ ಕಾರು ಸೇವೆಂತ್ ಮೈಲ್ ಎನ್ನುವಲ್ಲಿ ಯತೀಶ್ ಎಂಬುವವರ ಮನೆಯ ಅಂಗಳಕ್ಕೆ ಉರುಳಿಬಿದ್ದಿದ್ದು, ಕಾರಿನಲ್ಲಿದ್ದ ಮಹಿಳೆ ಸೇರಿದಂತೆ ನಾಲ್ವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. *ಬ್ರೇಕ್ ವೈಫಲ್ಯ ದಿಂದ ಅವಘಡ:* ಸೋಮವಾರಪೇಟೆ ತಾಲ್ಲೂಕಿನ ಕೊಗೆ ಕೋಡಿ ಎನ್ನುವಲ್ಲಿ ಬೆಂಗಳೂರಿನಿಂದ ಸೋಮವಾರಪೇಟೆಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸು ಬ್ರೇಕ್ ವಿಫಲಗೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಯಾಗಿದ್ದು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇನ್ನು ತಾಳತ ಮನೆ ಬಳಿ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಸಹ ಸಾರಿಗೆ ಬಸ್ಸು ಬ್ರೇಕ್ ವಿಫಲಗೊಂಡು ಬರೆಗೆ ಗುದ್ದಿದ್ದು ಚಾಲಕನ ಸಮಯ ಪ್ರಜ್ಞೆ ಯಿಂದ ಪ್ರಪಾತಕ್ಕೆ ಬೀಳಬೇಕಿದ್ದ ಬಸ್ಸನ್ನು ತಡೆದಿದ್ದಾರೆ. ಹಾಗೆಯೇ ರಾಷ್ಟ್ರೀಯ ಹೆದ್ದಾರಿ ಯಲ್ಲಿನ ಸಿಂಕೋನ ಸಮೀಪದ ತಿರುವಿನಲ್ಲಿ ಟಿಪ್ಪರ್ ಲಾರಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ಮಗುಚಿಕೊಂಡಿದ್ದು, ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು