7:45 AM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ: ಮಹಿಳಾ ಆಯೋಗದ ಒತ್ತಾಯಕ್ಕೆ ಮಣಿದ ಸರಕಾರ

20/07/2025, 14:20

ಮಂಗಳೂರು(reporterkarnataka.com): ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶದಲ್ಲಿ ಶವಗಳನ್ನು ಹೂತಿರುವ ಬಗ್ಗೆ ಹಾಗೂ ಇಲ್ಲಿಯ ಅಸ್ವಾಭಾವಿಕ ಸಾವು, ಕೊಲೆ ಪ್ರಕರಣಗಳ ಕುರಿತಾಗಿ ತನಿಖೆ ನಡೆಸಲು ಸರಕಾರ ವಿಶೇಷ ತನಿಖಾ ತಂಡ(Special Investigation Team)ವನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.

ಧರ್ಮಸ್ಥಳ ಸುತ್ತಮುತ್ತ ಶವಗಳನ್ನು ಹೂತಿಟ್ಟ ಬಗ್ಗೆ ವ್ಯಕ್ತಿಯೋರ್ವರು ನ್ಯಾಯಾಲಯಕ್ಕೆ ಹೇಳಿಕೆಯನ್ನು ನೀಡಿದ್ದು ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿ ಬಗ್ಗೆ ಕುಟುಂಬದವರು ನೀಡಿದ ಮಾಹಿತಿಗಳನ್ನು ಆಧರಿಸಿ ಮಹಿಳಾ ಆಯೋಗ ಸರಕಾರಕ್ಕೆ ವಿಶೇಷ ತನಿಖಾ ತಂಡ ರಚನೆಗೆ ಆಗ್ರವಹನ್ನು ಮಾಡಿತ್ತು. ಇದೀಗ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ ೨೦ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕ ಸಾವು, ಕೊಲೆ ಪ್ರಕರಣ ಹಾಗೂ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆಗಾಗಿ ಎಸ್‌ಐಟಿ ರಚಿಸಲಾಗಿದೆ.

ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ.ಪ್ರಣವ ಮೋಹಂತಿ ಅವರನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ನೇಮಕಗೊಳಿಸಲಾಗಿದ್ದು, ಉಪ ಪೊಲೀಸ್ ಮಹಾ ನಿರೀಕ್ಷಕರಾದ ಎಂ.ಎನ್.ಅನುಚೇತ್, ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತ, ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತಂಡದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು