11:11 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮುಹಿಯುದ್ದೀನ್ ಶಿಕ್ಷಣ ಸಂಸ್ಥೆ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತುಂಬೆ ಪಿಟಿಎಯ ದತ್ತಿ ನಿಧಿ ಸ್ಕಾಲರ್ ಶಿಪ್ ವಿತರಣೆ

20/07/2025, 23:16

ಬಂಟ್ವಾಳ(reporterkarnataka.com): ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಮತ್ತು ಆಡಳಿತ ಮಂಡಳಿ ಎಂಬ ನಾಲ್ಕು ಮುಖ್ಯ ಆಧಾರ ಸ್ಥಂಭಗಳು ಅನ್ಯೋನ್ಯವಾಗಿದ್ದಾಗ ಸಂಸ್ಥೆಯ ವಿದ್ಯಾರ್ಥಿಗಳು ನಾಗರಿಕರಾಗುತ್ತಾರೆ. ವಿದ್ಯಾರ್ಥಿಗಳು ಕೇವಲ ಅಂಕೆಗಳನ್ನು ಪಡೆಯುವುದನ್ನು ಉದ್ದೇಶವಾಗಿರಿಸದೆ, ಪಾಠೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಎಂದು ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಅಬ್ದುಲ್ ಸಲಾಂ ಹೇಳಿದರು.
ಅವರು ತುಂಬೆ ವಿದ್ಯಾ ಸಂಸ್ಥೆಗಳ ರಕ್ಷಕ-ಶಿಕ್ಷಕ ಸಂಘದ ಮಹಾ ಸಭೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತುಂಬೆ ಪಿಟಿಎಯ ದತ್ತಿ ನಿಧಿ ಸ್ಕಾಲರ್ ಶಿಪ್ ವಿತರಿಸಿ ಮಾತನಾಡಿದರು.
ಪಿಟಿಎಯ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಚಂದ್ರ ರೈ ದೇವಸ್ಯ ಮಾತನಾಡಿ ತುಂಬೆ ವಿದ್ಯಾ ಸಂಸ್ಥೆಯು ಕಳೆದ ಮೂರ್ನಾಲ್ಕು ದಶಕಗಳಿಂದ ಬಹಳ ಉತ್ತಮವಾದ ವಿದ್ಯಾರ್ಥಿಗಳನ್ನು ರೂಪಿಸಿ ನಾಗರಿಕರನ್ನಾಗಿ ಮಾಡುವಲ್ಲಿ ಯಶಸ್ಸನ್ನು ಕಂಡಿದೆ ಎಂದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಿಸಾರ್ ಅಹಮದ್ ವಳವೂರು ಮಾತನಾಡಿದರು.
ಪ್ರಾಂಶುಪಾಲರಾದ ವಿ.ಎಸ್.ಭಟ್ ಪ್ರಸ್ತಾವನೆ ಗೈದರು. ಎಂ.ಇ.ಟಿ.ಮ್ಯಾನೇಜರ್ ಬಿ. ಅಬ್ದುಲ್ ಕಬೀರ್ ವಿಚಾರ ಮಂಡಿಸಿದರು.
ಕಳೆದ ಶೈಕ್ಷಣಿಕ ಸಾಲಿನಲ್ಲಿ ಶೈಕ್ಷಣಿಕ ಸಾಧನೆ ಮಾಡಿ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಆಡಳಿತಾಧಿಕಾರಿ ಕಿಶೋರ್ ಸುವರ್ಣ,
ಪಿಟಿಎ ಉಪಾಧ್ಯಕ್ಷೆ ಮೋಹಿನಿ ಎಂ.ಸುವರ್ಣ, ಮ್ಯಾಕ್ಸಿಂ ಕುವೆಲ್ಲೋ, ಚಂಚಲಾಕ್ಷಿ ಉಪಸ್ಥಿತರಿದ್ದರು.
ವಿದ್ಯಾ ಕೆ. ಸ್ವಾಗತಿಸಿ, ಮಲ್ಲಿಕಾ ಶೆಟ್ಟಿ ವಂದಿಸಿದರು. ವಿಮಲಾ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು