9:59 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ; ಬಂಧಿತನಾದ ಅನಿಲ್‍ಗೂ, ನನಗೂ ಯಾವುದೇ ಸಂಬಂಧವಿಲ್ಲ: ಮಾಜಿ ಸಚಿವ ಬೈರತಿ ಬಸವರಾಜ್

21/07/2025, 20:25

ಬೆಂಗಳೂರು(reporterkarnataka.com): ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಪೋಲಿಸರು ಬಂಧಿಸಿರುವ ಅನಿಲ್‍ಗೂ, ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಮಾಜಿ ಸಚಿವರ ಹಾಗೂ ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜ್ ಹೇಳಿದ್ದಾರೆ.
ಪೋಲಿಸರಿಂದ ಬಂಧನಕ್ಕೊಳಗಾಗಿರುವ ಅನಿಲ್, ನನ್ನ ಸಹೋದರ ಮಗನೆಂದು ಮಾಧ್ಯಮಗಳಲ್ಲಿ ಬಿತ್ತರಿಸಲಾಗುತ್ತಿದೆ. ಇದು ಸಂಪೂರ್ಣವಾಗಿ ಸತ್ಯಕ್ಕೆ ದೂರವಾದ ಮಾತು. ಆತ ಯಾರೆಂಬುದೇ ನಮಗೆ ತಿಳಿದಿಲ್ಲ. ಈ ಪ್ರಕರಣದಲ್ಲಿ ನಮ್ಮ ಸಹೋದರನ ಮಗ ಶಾಮೀಲಾಗಿದ್ದಾರೆ ಎಂದು ಅನಗತ್ಯವಾಗಿ ರಾಜಕೀಯ ದುರುದ್ದೇಶದಿಂದ ಕೆಲವರು ನನ್ನ ಚಾರಿತ್ರ್ಯವಧೆ ಮಾಡಲು ಷಡ್ಯಂತ್ರ ನಡೆಸಿದ್ದಾರೆ. ನಾನು ಸಂಪೂರ್ಣವಾಗಿ ತನಿಖೆಗೆ ಸಹಕಾರ ಕೊಟ್ಟಿದ್ದೇನೆ. ರಾಜಕೀಯ ಪ್ರೇರಿತ ಈ ಪ್ರಕರಣವನ್ನು ಹೇಗೆ ಎದುರಿಸಬೇಕೆಂಬುದು ನನಗೆ ಗೊತ್ತಿದೆ. ಇಂತಹ ಷಡ್ಯಂತ್ರಗಳನ್ನು ಎದುರಿಸಿಯೇ ನಾನು ಮೇಲಕ್ಕೆ ಬಂದಿದ್ದೇನೆ. ಇದಕ್ಕೆಲ್ಲಾ ಹೆದರುವ ಜಾಯಮಾನದವನಲ್ಲ ಎಂದರು.
ಈ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂಬುದು ನನಗೆ ಗೊತ್ತಿದೆ. ಸೂಕ್ತ ಕಾಲದಲ್ಲಿ ಎಲ್ಲಾ ದಾಖಲೆಗಳೊಂದಿಗೆ ಮಾಧ್ಯಮಗಳ ಮುಂದೆ ಬರುತ್ತೇನೆ.
ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ನಾನು ಏನನ್ನೂ ಹೇಳಲು ಬಯಸುವುದಿಲ್ಲ. ದೇಶದ ಕಾನೂನಿಗೆ ತಲೆಬಾಗುತ್ತೇನೆ. ಪೋಲೀಸರ ವಿಚಾರಣೆಗೆ ಹಿಂದೆಯೂ ಸಹಕಾರ ಕೊಟ್ಟಿದ್ದೆ?ಮುಂದೆಯೂ ಕೊಡುತ್ತೇನೆ. ಹೆದರಿ ಕೂರುವ ಜಾಯಮಾನ ನನ್ನದಲ್ಲ. ಏನೇ ಬಂದರೂ ಎದುರಿಸಲು ಸಿದ್ಧನಿದ್ದೇನೆ ಎಂದು ಬೈರತಿ ಬಸವರಾಜ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು