11:13 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದ ಕಳ್ಳನಿಗೆ ಧರ್ಮದೇಟು

22/07/2025, 16:12

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ತಾಲೋಕಿನ ಕೊಂಡಂಗೇರಿ ಗ್ರಾಮದಲ್ಲಿ ಹಾಡಹಗಲೇ ಕುಡಿಯಲು ನೀರು ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಚಿನ್ನದ ಸರ ದೋಚಿ, ಬಳಿಕ ಗ್ರಾಮಸ್ಥರ ಕೈಗೆ ಸಿಕ್ಕಿ ಹಣ್ಣು ಗಾಯಿ ನೀರು ಗಾಯಿ ಯಾದ ಘಟನೆ ನಡೆದಿದೆ.

ಗ್ರಾಮದ ಸಾರಮ್ಮ ಎಂಬುವವರು ತನ್ನ ಸೊಸೆಯೊಂದಿಗೆ ವಾಸದಲ್ಲಿದ್ದ ಮನೆಗೆ ಆಗಮಿಸಿದ ಕಳ್ಳ ಪಕ್ಕದಲ್ಲಿ ಕೆಲಸಕ್ಕೆ ಬಂದಿದ್ದು ಕುಡಿಯಲು ನೀರು ಬೇಕು ಎಂದು ಕೇಳಿದ್ದಾನೆ, ನೀರು ತಂದು ಕೊಡುತ್ತಿದ್ದಂತೆ ಆಕೆಯ ಕುತ್ತಿಗೆಯಲ್ಲಿದ ಸರಕ್ಕೆ ಕೈ ಹಾಕಿದ್ದು, ಮಹಿಳೆ ಪ್ರತಿರೋಧ ತೋರಿಸಿದಕ್ಕೆ ಕೈ ನಲ್ಲಿದ್ದ ಚಾಕುವಿನಿಂದ ಹಲ್ಲೆ ಮಾಡಿ ಸರ ಕಿತ್ತು ಪರಾರಿಯಾಗಿದ್ದಾನೆ. ತಕ್ಷಣ ಎಚೆತ್ತುಕೊಂಡ ಗ್ರಾಮದ ಯುವಕರು ಗ್ರಾಮದಲ್ಲಿ ಕಳ್ಳನಿಗಾಗಿ ಹುಡುಕಾಟ ನಡೆಸಿದ್ದು, ಈ ಸಂದರ್ಭ ಕಾಫಿ ತೋಟವೊಂದರಲ್ಲಿ ಅವಿತು ಕುಳಿತಿದ್ದ ಕಳ್ಳ ಪಾಲಿಬೆಟ್ಟ ಗ್ರಾಮದ ಹ್ಯಾರಿಸ್ ಪುತ್ರ ಮನಾವರ್ ನಿಗೆ ಆಳಿಗೆ ಒಂದು ಎಟ್ಟು ಎನ್ನುವಂತೆ ಕೊಟ್ಟು ಪೊಲೀಸರಿಗೆ ಒಪ್ಪಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು