11:08 PM Thursday24 - July 2025
ಬ್ರೇಕಿಂಗ್ ನ್ಯೂಸ್
Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.… ಐಟಿಐ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಅವಕಾಶಕ್ಕಾಗಿ ಬಜಾಜ್ ಆಟೋ ಜತೆ ರಾಜ್ಯ… ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಸಚಿವ ಡಾ. ಶರಣಪ್ರಕಾಶ್‌… Kodagu | ಶೌಚಾಲಯ ಗುಂಡಿಗೆ ಬಿದ್ದ ಕಾಡಾನೆ: ಸ್ವಪ್ರಯತ್ನದಿಂದಲೇ ಮೇಲೆದ್ದು ಬಂದ ಸಲಗ! ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ… Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು…

ಇತ್ತೀಚಿನ ಸುದ್ದಿ

ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

23/07/2025, 17:48

ಬೆಂಗಳೂರು(reporterkarnataka.com):ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ರಾಜೀನಾಮೆ ವಿಷಯ ಭಾರಿ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.
ಉಪರಾಷ್ಟ್ರಪತಿ ಅನಿರೀಕ್ಷಿತ ರಾಜೀನಾಮೆ‌ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಬಿಜೆಪಿ ಆರೋಗ್ಯ ಚೆನ್ನಾಗಿಲ್ಲದಿರುವುದೇ ಇದಕ್ಕೆ ಕಾರಣ. ಬಿಜೆಪಿಯಲ್ಲಿರುವ ಸರ್ವಾಧಿಕಾರ ಧೋರಣೆಯೇ ಜಗದೀಪ್‌ ಧನಕರ್‌ ಅವರ ರಾಜೀನಾಮೆಗೆ ಪ್ರಮುಖ ಕಾರಣವಾಗಿದೆ ಎಂದು ಸಚಿವರು ಆರೋಪಿಸಿದರು.
ಇಡೀ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಿದರೆ ಬಿಜೆಪಿಯಲ್ಲಿ ಏನೋ ಸರಿಯಲ್ಲಿ ಎಂಬುದು ಸ್ಪಷ್ಟವಾಗುತ್ತದೆ. ಇಡೀ ಪಕ್ಷ ಇಬ್ಬರ ಕೈಯಲ್ಲಿದೆ. ಸರ್ವಾಧಿಕಾರ ಹೆಚ್ಚಾಗಿರುವುದರಿಂದ ಬೇರೆ ಯಾವ ನಾಯಕರೂ ಮಾತನಾಡದೇ ಮುಗಮ್ಮಾಗಿದ್ದಾರೆ. ಜನರಿಗೆ ಇದು ಗೊತ್ತಾಗುವುದಿಲ್ಲ ಎಂದು ಬಿಜೆಪಿಯವರು ತಿಳಿದುಕೊಂಡಿದ್ದಾರೆ. ಆದರೆ ಇಡೀ ಪ್ರಕರಣದಿಂದ ಬಿಜೆಪಿಯ ಬಣ್ಣ ಸಂಪೂರ್ಣ ಬಯಲಾಗಿದೆ ಎಂದು ಡಾ.ಪಾಟೀಲ್‌ ದೂರಿದರು.
ಬಿಜೆಪಿಯಲ್ಲಿ ಪ್ರಜಾಪ್ರಭುತ್ವ, ನೀತಿ-ನಿಯಮಗಳು ಇಲ್ಲ. ಕೇಂದ್ರ ಸರ್ಕಾರ ಕೂಡ ಸಂವಿಧಾನ ಪಾಲನೆ ಮಾಡುತ್ತಿಲ್ಲ. ಸರ್ಕಾರವನ್ನು ಮುನ್ನಡೆಸುತ್ತಿರುವವರು ಇದುವರೆಗೂ ಒಂದಾದರೂ ಸುದ್ದಿಗೋಷ್ಠಿ ಮಾಡಿದ್ದಾರಾ? ಏಕಪಕ್ಷೀಯ ನಿರ್ಧಾರಗಳೇ ಹೆಚ್ಚಾಗಿ ತೆಗೆದುಕೊಳ್ಳಲಾಗುತ್ತದೆ. ಇಂಥ ಅವ್ಯವಸ್ಥೆಗಳಿಂದಲೇ ಬಿಜೆಪಿಯಲ್ಲಿ ಅನಾರೋಗ್ಯ ಪರಿಸ್ಥಿತಿ ಇದೆ ಎಂದು ಸಚಿವರು ಟೀಕಿಸಿದರು.

*ಗ್ಯಾರಂಟಿಗಳಿಂದ ಹೆಚ್ಚಾದ ತಲಾದಾಯ:*
ನಮ್ಮ ಕಾಂಗ್ರೆಸ್‌ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಳಿಂದ ಕರ್ನಾಟಕದಲ್ಲಿ ತಲಾದಾಯ ಹೆಚ್ಚಾಗಿದೆ. ನಾವೀಗ ದೇಶಕ್ಕೆ ನಂಬರ್ ಒನ್‌ ಸ್ಥಾನದಲ್ಲಿದ್ದೇವೆ ಎಂದು ಸಚಿವರು ತಿಳಿಸಿದರು.
50 ಸಾವಿರ ಕೋಟಿ ಹಣ ನೇರವಾಗಿ ಜನರಿಗೆ ತಲುಪುತ್ತಿದೆ. ಕರ್ನಾಟಕದಲ್ಲಿ ಜನಸ್ನೇಹಿ ಸರಕಾರವಿದೆ. ಜನೋಪಯೋಗಿ ಆರ್ಥಿಕ ನೀತಿಗಳಿಂದ ಸುಧಾರಣೆಯಾಗುತ್ತಿದೆ. ನಮ್ಮ ಕಾಂಗ್ರೆಸ್ ಅಧಿಕಾರದಲ್ಲಿ ಭೂ ಸುಧಾರಣಾ ಕಾಯಿದೆ ಸೇರಿದಂತೆ ಒಳ್ಳೊಳ್ಳೆ ಯೋಜನೆಗಳು ಅನುಷ್ಠಾನಕ್ಕೆ ಬಂದಿವೆ. ಇದು ತಲಾದಾಯ ಹೆಚ್ಚಳಕ್ಕೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕಾರಣವಾಗಿದೆ ಎಂದು ಡಾ.ಪಾಟೀಲ್‌ ತಿಳಿಸಿದರು.

*ಜಿಎಸ್‌ಟಿ ಕೇಂದ್ರದ ನಿರ್ಧಾರ:*
ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್‌ ನೀಡಿರುವ ನಿರ್ಧಾರ ಕೇಂದ್ರ ಸರ್ಕಾರದ ನಿರ್ಣಯದಂತೆ ಮಾಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಜಿಎಸ್‌ಟಿ ಮಂಡಳಿ ಮುಖ್ಯಸ್ಥರು ಹಣಕಾಸು ಸಚಿವರು. ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಅದರಂತೆ ಇಂಪ್ಲಿಮೆಂಟ್‌ ಮಾಡಲಾಗುತ್ತದೆ. ಜಿಎಸ್ ಟಿ ಎಲ್ಲವನ್ನು ಕೇಂದ್ರ ಸರ್ಕಾರ ಕಲೆಕ್ಟ್ ಮಾಡುತ್ತೆ, ಬಳಿಕ ರಾಜ್ಯಗಳಿಗೆ ಹಂಚಿಕೆ ಮಾಡುತ್ತದೆ. ನಾವು ಹೇಗೆ ನೊಟೀಸ್ ಕೊಡಲು ಸಾಧ್ಯ? ಎಲ್ಲ ನಿರ್ಧಾರವನ್ನು ಕೇಂದ್ರ ಸರಕಾರವೇ ಮಾಡಿದೆ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು