6:34 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಾಮಾನ್ಯ ವರ್ಗಕ್ಕೆ ಸೇರ್ಪಡೆ: ದೈವಜ್ಞ ಬ್ರಾಹ್ಮಣ ಸಮುದಾಯದಿಂದ ಶಾಸಕ ವೇದವ್ಯಾಸ ಕಾಮತ್ ಗೆ ಮನವಿ

23/07/2025, 20:50

ಮಂಗಳೂರು(reporterkarnataka.com):ದೈವಜ್ಞ ಬ್ರಾಹ್ಮಣ ಸಮುದಾಯವನ್ನು ಕರ್ನಾಟಕ ಸರಕಾರದ ಶಿಕ್ಷಣದ‌ RTE, ಸ್ಕಾಲರ್ಶಿಪ್ ಇತ್ಯಾದಿಗೆ ಸಂಬಂಧಿಸಿದ SATS ವೆಬ್ ಸೈಟ್ ನಲ್ಲಿ, ಇತರೆ ಹಿಂದುಳಿದ ವರ್ಗ 2ಎ ದಿಂದ ಸಾಮಾನ್ಯ ವರ್ಗಕ್ಕೆ ಸೇರಿಸಿರುವುದು ಅನ್ಯಾಯವಾಗಿದ್ದು, ಕೂಡಲೇ ಸರ್ಕಾರದ ಗಮನಕ್ಕೆ ತಂದು ನ್ಯಾಯ ಒದಗಿಸುವಂತೆ ದೈವಜ್ಞ ಬ್ರಾಹ್ಮಣರ ಚಿನ್ನ – ಬೆಳ್ಳಿ ಕೆಲಸಗಾರರ ಸಂಘ (ರಿ.) ದ ಮುಖಂಡರು ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಸಮುದಾಯದ ಮುಖಂಡರ ಅಹವಾಲನ್ನು ಆಲಿಸಿದ ಶಾಸಕರು, ಇದುವರೆಗೂ ದೈವಜ್ಞ ಬ್ರಾಹ್ಮಣ ಸಮಾಜವು ಸಾಮಾಜಿಕವಾಗಿ ಒಬಿಸಿ 2ಎ ಪ್ರವರ್ಗದಲ್ಲಿ ಇತ್ತು. ಅದೇ ರೀತಿಯಲ್ಲಿ ಜಾತಿ ಪ್ರಮಾಣ ಪತ್ರವನ್ನೂ ಸಹ ಪಡೆಯಲಾಗಿದೆ. ಆದರೂ ರಾಜ್ಯ ಕಾಂಗ್ರೆಸ್ ಸರ್ಕಾರವು ಏಕಪಕ್ಷೀಯವಾಗಿ 2025 ರ ಹೊಸ ದಾಖಲಾತಿ ಪ್ರಕ್ರಿಯೆಯಲ್ಲಿ ದೈವಜ್ಞ ಬ್ರಾಹ್ಮಣ ಸಮುದಾಯವನ್ನು (519) ಓಬಿಸಿಯಿಂದ ಸಾಮಾನ್ಯ ವರ್ಗಕ್ಕೆ ಸೇರಿಸಿದೆ. ಯಾವ ಆಧಾರದಲ್ಲಿ ಹೀಗೆ ಮಾಡಲಾಗಿದೆ ಎಂಬ ಸಮಾಜದ ಮುಖಂಡರ ಪ್ರಶ್ನೆ ನ್ಯಾಯಯುತವಾದುದು. ಈ ಬಗ್ಗೆ ಖಂಡಿತವಾಗಿಯೂ ಮುಂಬರುವ ಅಧಿವೇಶನದಲ್ಲಿ ಪ್ರಸ್ತಾಪಿಸಿ ರಾಜ್ಯ ಸರ್ಕಾರದ ಗಮನವನ್ನು ಸೆಳೆಯುತ್ತೇನೆ. ಹೊಸ ದಾಖಲಾತಿ ಪ್ರಕ್ರಿಯೆಯಲ್ಲಿನ ಲೋಪದೋಷವನ್ನು ಸರಿಪಡಿಸಿ ಸಮುದಾಯಕ್ಕೆ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ರವೀಂದ್ರ ಜಿ. ಗೋಕರ್ಣಕರ್, ಕಾರ್ಯದರ್ಶಿ ದರ್ಶನ್ ಸಿ.ಶೇಟ್, ಸಂಘಟನಾ ಕಾರ್ಯದರ್ಶಿ ಸಂದೀಪ್ ಜಿ. ಶೇಟ್, ಚೇತನ್ ಶೇಟ್, ಅರುಣ್ ಜಿ ಶೇಟ್, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು