11:36 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕಳಸ: ಜೀಪು ನದಿಗೆ ಬಿದ್ದು ಪುತ್ರ ನೀರುಪಾಲು; ಮನನೊಂದ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ

25/07/2025, 11:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭದ್ರಾ ನದಿಗೆ ಜೀಪ್ ಬಿದ್ದು ಮಗ ನೀರು ಪಾಲಾದ ಘಟನೆಯಿಂದ ಮನನೊಂದ ತಾಯಿ ಮಗನ ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ. ಮೃತರನ್ನ 48 ವರ್ಷದ ರವಿಕಲಾ ಎಂದು ಗುರುತಿಸಲಾಗಿದೆ. ಮೃತ ರವಿಕಲಾ ಪುತ್ರ 23 ವರ್ಷದ ಶಮಂತ್ ಪಿಕಪ್ ಜೀಪಿನಲ್ಲಿ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದು ನೀರು ಪಾಲಾಗಿದ್ದಾನೆ. ಮಲೆನಾಡಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಜೀಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯೊಡೆದು ಪಕ್ಕದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ ಉರುಳಿ ಬಿದ್ದು ಶಮಂತ್ ನದಿ ಪಾಲಾಗಿದ್ದಾನೆ.

ಶಮಂತ್ ಹಲವು ದಿನಗಳಿಂದ ಪಿಕಪ್ ಜೀಪ್‌ನಲ್ಲಿ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದನು. ನಿನ್ನೆ ಸಂಜೆ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಗ್ರಾಮಕ್ಕೆ ಹೋಗುವಾಗ ಭದ್ರಾ ನದಿಗೆ ಬಿದ್ದು ನೀರು ಪಾಲಾಗಿದ್ದನು. ಕಾಫಿ ತೋಟದಿಂದ ಕಾರ್ಮಿಕರನ್ನ ಕರೆತರುವಾಗ ಅಪಘಾತ ಸಂಭವಿಸಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು. ಮಲೆನಾಡಲ್ಲಿ ನಿರಂತರ ಮಳೆ ಸುರಿಯುತ್ತಿದ್ದು ಭದ್ರಾ ನದಿಯಿಂದ ಜೀಪ್ ಮೇಲೆತ್ತುವ ಕಾರ್ಯಾಚರಣೆಗೂ ತೊಂದರೆಯಾಗಿತ್ತು. ಆದರೆ, ನಿನ್ನೆ ಸಂಜೆ ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು. ಆದರೆ, ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ ವೇಳೆ ಮನೆ ಹಿಂದಿನ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು