2:28 AM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

25/07/2025, 12:37

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೋಮವಾರಪೇಟೆ ಪಟ್ಟಣ ಪಂಚಾಯಿತಿಯ ಕಡತಗಳ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ತಿರುವು ಸಿಕ್ಕಿದೆ. ಪಂಚಾಯಿತಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ಫೈಲ್ ಕಳುವು ಮಾಡುತ್ತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸಿಬ್ಬಂದಿಯನ್ನು ಅಮಾನತ್ತು ಗೊಳಿಸಲಾಗಿದೆ.



*ವಸತಿ ಹಂಚಿಕೆ ಫೈಲ್ ನಾಪತ್ತೆ:* ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಿಗೆ 16 ವಸತಿ ಹಂಚಿಕೆಯಾಗಿದ್ದು ಮಂಜೂರಾಗಿದ್ದ ಒಂದು ವಸತಿಗೆ ಸೇರಿದ ಕಡತ ನಾಪತ್ತೆಯಾಗಿತ್ತು, ಈ ಬಗ್ಗೆ ಸದಸ್ಯರ ಕೌನ್ಸಿಲ್ ಸಭೆಯಲ್ಲಿ ಸಹಾ ಚರ್ಚೆಗೆ ಗ್ರಾಸವಾಗಿ, ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಬಳಿಕ ಆಡಳಿತ ಮಂಡಳಿ ಸರ್ವ ಸದಸ್ಯರ ಸಮ್ಮುಖದಲ್ಲೇ ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದ ವೇಳೆ ಗುತ್ತಿಗೆ ಸಿಬ್ಬಂದಿ ಶ್ವೇತಾ ಎಂಬುವವರು ಕಡತ ಕಳುವು ಮಾಡುವುದು ಕಂಡು ಬಂದಿದೆ. ತಕ್ಷಣಕ್ಕೆ ಆಡಳಿತ ಮಂಡಳಿ ಹಾಗೂ ಕಾರ್ಯ ನಿರ್ವಹಣಾಧಿಕಾರಿ ಶ್ವೇತಾ ಅವರನ್ನು ಸೇವೆಯಿಂದ ಅಮಾನತ್ತು ಗೊಳಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು