ಇತ್ತೀಚಿನ ಸುದ್ದಿ
Kodagu | ಭಾರೀ ಗಾಳಿ- ಮಳೆ: ಮನೆಯ ಗೋಡೆ ಕುಸಿದು 29ರ ಹರೆಯದ ಕಾರ್ಮಿಕ ಮಹಿಳೆ ಸಾವು
26/07/2025, 14:27

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ತೀವ್ರ ಗಾಳಿ ಮಳೆಗೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಇಂದು ಬೆಳಗ್ಗೆ ಸಿಹಿ ನಿದ್ರೆಯಲ್ಲಿರುವಾಗಲೇ ಕಾರ್ಮಿಕ ಮಹಿಳೆಯೊಬ್ಬರು ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ ಅಫ್ಜಲ್ ಪುರದಿಂದ ಕೂಲಿ ಕೆಲಸಕ್ಕೆ ಎಂದು ಬಂದಿದ್ದ ಸುಷ್ಮಾ(29) ಮೃತ ಮಹಿಳೆ. ಇಂದು ಬೆಳಿಗ್ಗೆ 5.30ಕ್ಕೆ ಒಂದೇ ಕೋಣೆಯಲ್ಲಿ ಇಬ್ಬರು ಮಕ್ಕಳು ಹಾಗೂ ಸಹೋದರ ಸಹಾ ಮಲಗಿದ್ದರು ಎನ್ನಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಳೆದ ಎರಡು ವರ್ಷದ ಹಿಂದೆ ಸೋಮವಾರಪೇಟೆಗೆ ಆಗಮಿಸಿದ್ದ ಈ ಕುಟುಂಬ ಮಣ್ಣಿನ ಗೋಡೆಯಿಂದ ನಿರ್ಮಿಸಿದ ಮನೆಯಲ್ಲಿ ವಾಸಿಸುತ್ತಿದ್ದರು.