ಇತ್ತೀಚಿನ ಸುದ್ದಿ
Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ ದಾರುಣ ಸಾವು
28/07/2025, 18:14

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ಹಿಂಭಾಗದಿಂದ ಬಂದ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಬೆಜ್ಜವಳ್ಳಿ ಸಮೀಪ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಿಂದ ದಾನಸಾಲೆಗೆ ಹೋಗುತ್ತಿದ್ದ ಅಬ್ದುಲ್ ರೆಹಮಾನ್ (44 ) ಎಂಬುವರಿಗೆ ಸಮಕಾನಿ ದೇವಸ್ಥಾನ ಬಳಿ ಪ್ರವಾಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಅಬ್ದುಲ್ ರೆಹಮಾನ್ ಮೃತಪಟ್ಟಿದ್ದಾರೆ.
ತೀರ್ಥಹಳ್ಳಿಯ ಜಯ ಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.