3:36 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಮಂಗಳೂರು- ಚಿತ್ರದುರ್ಗ ಖಾಸಗಿ ಬಸ್ ಶಿವಮೊಗ್ಗ ಬಳಿ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು; 10ಕ್ಕೂ ಹೆಚ್ಚು ಮಂದಿಗೆ ಗಾಯ

30/07/2025, 14:21

ಶಿವಮೊಗ್ಗ(reporterkarnataka.com): ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 10 ಮಂದಿ‌ ಗಂಭೀರ ಗಾಯಗೊಂಡ ದಾರುಣ ಘಟನೆ ಗಾಜನೂರು ಸಮೀಪ ಬುಧವಾರ ಮುಂಜಾನೆ ನಡೆದಿದೆ.
ಗಾಜನೂರು ಡ್ಯಾಂ ಬಳಿ ಮುಂಜಾನೆ
ಸುಮಾರು 3 ಗಂಟೆ ಈ ದುರ್ಘಟನೆ ಸಂಭವಿಸಿದೆ.
ಮಂಗಳೂರಿನಿಂದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಕಡೆ ಹೊರಟಿದ್ದ ದುರ್ಗಾಂಬ ಬಸ್ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಲಾರಿ ಆಂಧ್ರ ಪ್ರದೇಶದ್ದಾಗಿದೆ. ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡ ಬಸ್ ಕಂಡಕ್ಟರ್ ಅಣ್ಣಪ್ಪ (40) ಹಾಗೂ ಚಳ್ಳಕೆರೆ ನಿವಾಸಿ ಹರ್ಷಿತ್ (35) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದ ಶಿವಮೊಗ್ಗ ಮಂಗಳೂರು ರಾಷ್ಟ್ರೀಯ ಹೆದ್ದಾರಿ 169(A) ರಲ್ಲಿ ಕೆಲಕಾಲ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು‌. ಸ್ಥಳಕ್ಕೆ ತುಂಗಾ ನಗರ ಠಾಣೆಯ ಪೊಲೀಸ್​ ಇನ್ಸ್​ಪೆಕ್ಟರ್​ ಗುರುರಾಜ್ ಹಾಗೂ ತಂಡ ಭೇಟಿ ನೀಡಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಲಾರಿ ಕತ್ತಲಲ್ಲಿ ನಿಂತಿರುವುದು ಹಾಗೂ ಬಸ್​ ವೇಗವಾಗಿ ಚಲಿಸುತ್ತಿರುವುದೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಗಾಯಾಳುಗಳ ಗುರುತು ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು