9:22 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ ಸಚಿವೆ

30/07/2025, 18:04

ಬೆಂಗಳೂರು(reporterkarnataka.com): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯದ (ಐಸಿಪಿಎಸ್) ಬಾಲಕರ ಬಾಲಮಂದಿರ ಹಾಗೂ ಯಶೋದರಮ್ಮ ದಾಸಪ್ಪ ರಾಜ್ಯ ಮಹಿಳಾ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಬಾಲಕರ ಬಾಲ ಮಂದಿರದಲ್ಲಿ ವಿವಿಧ ರಾಜ್ಯಗಳಿಂದ 110 ಮಕ್ಕಳಿದ್ದು ಇಲಾಖೆ ವತಿಯಿಂದ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಶೀಲನೆ ನಡೆಸಿದರು. ಮಹಿಳಾ ನಿಲಯ ಹಾಗೂ ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೂ ಭೇಟಿ ನೀಡಿದ ಸಚಿವರು, ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ, ಇಲಾಖೆಯಿಂದ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು.

* *ಚಿಣ್ಣರನ್ನು ಮುದ್ದಾಡಿದ ಸಚಿವರು*
ಬಳಿಕ ಸರ್ಕಾರಿ ಶಿಶು ಮಂದಿರಕ್ಕೂ ಭೇಟಿ ನೀಡಿದ ಸಚಿವರು, ಶಿಶುಗಳ ಪಾಲನೆ, ಪೋಷಣೆ ಹಾಗೂ ಪುಟಾಣಿಗಳ ಆರೈಕೆ ಕುರಿತು ಪರಿಶೀಲನೆ ನಡೆಸಿದರು.
ಆರು ವರ್ಷದ ಒಳಗಿನ 46 ಮಕ್ಕಳು ಕೇಂದ್ರದಲ್ಲಿದ್ದಾರೆ. ಶಿಶುಗಳ ಉತ್ತಮ ಆರೈಕೆಯು ಮಗುವಿನ ಆರೋಗ್ಯಕರ ಬೆಳವಣಿಗೆಗೆ ಅತ್ಯಗತ್ಯ ಎಂದು ಸಚಿವರು ಹೇಳಿದರು.
ಮಕ್ಕಳ ಪಾಲನೆ ಮಾಡುತ್ತಿರುವ ಸಿಬ್ಬಂದಿ ವರ್ಗದವರ ಕಾರ್ಯವೈಖರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ ಚಿಣ್ಣರನ್ನು‌ ಎತ್ತಿಕೊಂಡು ಮುದ್ದಾಡಿದರು.
ಈ ವೇಳೆ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ಉಪ ನಿರ್ದೇಶಕರಾದ ಸುಮಂಗಲಾ ಮಳಾಪುರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು