7:08 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ

01/08/2025, 14:07

ಬೆಂಗಳೂರು(reporterkarnataka.com): ಧರ್ಮಸ್ಥಳದಲ್ಲಿ ಸಮಾಧಿ ಉತ್ಖನನ ವೇಳೆ ಸ್ಪಾಟ್ ನಂ.1ರಲ್ಲಿ ದೊರೆತ ಡೆಬಿಟ್‌ ಮತ್ತು ಪ್ಯಾನ್‌ ಕಾ‌ರ್ಡ್‌ನ ವಾರಸುದಾರರು ಪತ್ತೆಯಾಗಿದ್ದು, ಧರ್ಮಸ್ಥಳದ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಡೆಬಿಟ್ ಹಾಗೂ ಪಾನ್ ಕಾರ್ಡ್ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ನಿವಾಸಿಯಾಗಿದ್ದ ಸುರೇಶ್ ಮತ್ತು ಆತನ ತಾಯಿ ಸಿದ್ದಲಕ್ಷ್ಮಮ್ಮ ಎಂಬವರದ್ದು ಎಂದು ತನಿಖೆಯ ವೇಳೆ ತಿಳಿದು ಬಂದಿದೆ.
ದಾಬಸ್‌ಪೇಟೆಯ ನಿವಾಸಿಯಾದ ಗಂಗಮರಿಯಪ್ಪ ಹಾಗೂ ಸಿದ್ದಲಕ್ಷ್ಮಮ್ಮ ಎಂಬುವರ ಪುತ್ರ ಸುರೇಶ್ ಪರ್ಸ್‌ನಲ್ಲಿ ಎರಡು ಪ್ಯಾನ್‌ ಕಾರ್ಡ್‌ಗಳು ಪತ್ತೆಯಾಗಿತ್ತು. ಒಂದು ಸುರೇಶ್‌ ಎಂಬಾತನ ಪ್ಯಾನ್‌ ಕಾರ್ಡ್ , ಮತ್ತೊಂದು ಅವರ ತಾಯಿ ಸಿದ್ದಲಕ್ಷ್ಮಮ್ಮ ಅವರ ಪ್ಯಾನ್ ಕಾರ್ಡ್ ಎಂಬುದು ಬಹಿರಂಗವಾಗಿತ್ತು. 2‌ ವರ್ಷಗಳ ಹಿಂದೆ ಮನೆ ಬಿಟ್ಟು ತೆರಳಿದ್ದ ಸುರೇಶ್ ಆಗ ಧರ್ಮಸ್ಥಳಕ್ಕೆ ತೆರಳಿದ್ದ ಎನ್ನಲಾಗಿದೆ. ಮಾರ್ಚ್ ತಿಂಗಳಲ್ಲಿ ಜಾಂಡಿಸ್‌ನಿಂದಾಗಿ ಸುರೇಶ್ ಸಾವನ್ನಪ್ಪಿದ್ದ. ಇನ್ನು ಸಿದ್ದಲಕ್ಷ್ಮಮ್ಮ ಬದುಕಿದ್ದಾರೆ. ಈ ಕುರಿತು ಸುರೇಶ್‌ ಕುಟುಂಬಸ್ಥರು ಪ್ರತಿಕ್ರಿಯೆ ನೀಡಿದ್ದಾರೆ.

ಮೃತ ಸುರೇಶ್ ಅಕ್ಕ ರೂಪಾ ಮಾತನಾಡಿ, ಸಾಕಷ್ಟು ಬಾರಿ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಆಗ ಡೆಬಿಟ್ ಹಾಗೂ ಪಾನ್ ಕಾರ್ಡ್ ಧರ್ಮಸ್ಥಳದಲ್ಲಿ ಮಿಸ್ ಆಗಿರಬೇಕು. ನಮ್ಮ ತಾಯಿಯ ಎಟಿಎಂ ಕಾರ್ಡ್ ಕಳೆದು ಹೋಗಿದೆ ಎಂದು ಹೇಳಿದ್ದ. ಆಗ ನಮ್ಮ ತಾಯಿ ಹೊಸ ಎಟಿಎಂ ಕಾರ್ಡ್ ತೆಗೆದುಕೊಂಡಿದ್ದರು. ಸುರೇಶ್‌ 2 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ, 5 ತಿಂಗಳ ಹಿಂದೆ ಇಲ್ಲೇ ಮೃತಪಟ್ಟಿದ್ದರು. ಧರ್ಮಸ್ಥಳದ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
ಮೃತ ಸುರೇಶ್ ತಾಯಿ ಮಾತನಾಡಿ, ಅಲ್ಲಿ ಸಿಕ್ಕ ದಾಖಲೆಗಳು ನನ್ನದು ಹಾಗೂ ನನ್ನ ಮಗನದ್ದೇ, ಈ ಹಿಂದೆ ಧರ್ಮಸ್ಥಳಕ್ಕೆ ಹೋದಾಗ ಕಳೆದು ಹೋಗಿದೆ ಎಂದು ಮಗ ಸುರೇಶ್ ಹೇಳಿದ್ದ. ಸುರೇಶ್ ಅನಾರೋಗ್ಯದಿಂದ ಮೃತ ಪಟ್ಟಿದ್ದಾನೆ. ನನ್ನ ಎಟಿಎಂ ಕಾರ್ಡ್ ಸುರೇಶ್ ಬಳಿ ಇತ್ತು, ಅಲ್ಲಿ ಹೋದಾಗ ಕಳೆದು ಹೋಗಿದೆ. ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಲ್ಲಿ ಅನಾರೋಗ್ಯದಿಂದ ಮೃತ ಪಟ್ಟಿದ್ದಾನೆ. ಧರ್ಮಸ್ಥಳ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲವೆಂದು ಹೇಳಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು