ಇತ್ತೀಚಿನ ಸುದ್ದಿ
ಅತ್ಯಾಚಾರ ಪ್ರಕರಣ | ಪ್ರಜ್ವಲ್ ರೇವಣ್ಣ ದೋಷಿ: ಕೋರ್ಟ್ ತೀರ್ಪು; ಕಣ್ಣೀರಿಟ್ಟ ಮಾಜಿ ಸಂಸದ
01/08/2025, 17:39

ಬೆಂಗಳೂರು(reporterkarnataka.com): ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದೆ.
ಪ್ರಜ್ವಲ್ ರೇವಣ್ಣ ತನ್ನ ಕೆ.ಆರ್.ನಗರದ ಮನೆಯಲ್ಲಿ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ್ದ ಎಂದು ದೂರು ನೀಡಲಾಗಿತ್ತು.
ನ್ಯಾ. ಗಜಾನನ ಭಟ್ ಭಟ್ ಅವರಿದ್ದ ಪೀಠ ಪ್ರಜ್ವಲ್ ದೋಷಿ ಎಂದು ತೀರ್ಪು ನೀಡಿದೆ. ತೀರ್ಪು ಪ್ರಕಟಿಸುವ ವೇಳೆ ಪ್ರಜ್ವಲ್ ರೇವಣ್ಣ ಕೂಡ ಕೋರ್ಟ್ ಹಾಲ್‌ನಲ್ಲಿ ಹಾಜರಿದ್ದರು. ಶಿಕ್ಷೆಯ ಪ್ರಮಾಣ ಶನಿವಾರ ಪ್ರಕಟವಾಗಲಿದೆ. ಕೋರ್ಟ್ ದೋಷಿ ಎಂದು ತೀರ್ಪು ನೀಡುವ ವೇಳೆ ಪ್ರಜ್ವಲ್ ರೇವಣ್ಣ ಕಣ್ಣಿರಿಟ್ಟಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.