6:07 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆ: ಶಾಸಕ ವೇದವ್ಯಾಸ ಕಾಮತ್ ಸಾರಥ್ಯ

03/08/2025, 10:59

ಮಂಗಳೂರು(reporterkarnataka.com): ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆ ಶಾಸಕ ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಅಟಲ್ ಸೇವಾ ಕೇಂದ್ರದಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕರು, ಪಕ್ಷ ಸಂಘಟನಾತ್ಮಕ ನೆಲೆಯಲ್ಲಿ ಶಕ್ತಿಕೇಂದ್ರದ ಪ್ರಮುಖರಿಗೆ ಅತ್ಯಂತ ಹೆಚ್ಚಿನ ಜವಾಬ್ದಾರಿ ಇದೆ. ನಿಮ್ಮೆಲ್ಲರ ಸಾಮರ್ಥ್ಯ ಅರಿತೇ ಪಕ್ಷವು ಅಂತಹ ಜವಾಬ್ದಾರಿಯುತ ಸ್ಥಾನಕ್ಕೆ ಆಯ್ಕೆ ಮಾಡಿದ್ದು, ಅದಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸುವ ಸಂಕಲ್ಪ ನಿಮ್ಮದಾಗಲಿ. ಹಿರಿಯ ಕಾರ್ಯಕರ್ತರಿಂದ ಸಲಹೆಗಳನ್ನು ಪಡೆದುಕೊಂಡು, ಕಿರಿಯ ಕಾರ್ಯಕರ್ತರನ್ನು ಜೋಡಿಸಿಕೊಂಡು ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನಿಮ್ಮದು. ಮುಂಬರುವ ದಿನಗಳಲ್ಲಿ ಮಂಡಲ ಹಾಗೂ ಜಿಲ್ಲೆಯ ನೇತೃತ್ವದಲ್ಲಿ ಪಕ್ಷದ ಅನೇಕ ಚಟುವಟಿಕೆಗಳು ನಡೆಯಲಿದ್ದು, ಪ್ರತಿಯೊಂದು ಕಾರ್ಯಕ್ರಮದಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ, ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಜನ ವಿರೋಧಿ ನೀತಿಗಳು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ನಿಮ್ಮ ಸಹಕಾರ ಅತ್ಯಗತ್ಯವಾಗಿದ್ದು, ಮತ್ತೊಮ್ಮೆ ಎಲ್ಲರಿಗೂ ಶುಭವಾಗಲಿ, ಭಾರತೀಯ ಜನತಾ ಪಾರ್ಟಿ ಎಂಬ ಕುಟುಂಬದಲ್ಲಿ ಜೊತೆಯಾಗಿ ಸಾಗೋಣ ಎಂದು ಆಶಿಸುತ್ತೇನೆ.
ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್, ಹಾಗೂ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು