8:59 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಅಸ್ತಿಪಂಜರ ಶೋಧಕ್ಕೆ ಗ್ರೌಂಡ್ ಪೆನೇಟ್ರೇಟಿಂಗ್ ರೇಡಾರ್‌ ಬಳಕೆಗೆ ಸುಜಾತಾ ಭಟ್ ಪರ ವಕೀಲರ ಆಗ್ರಹ

03/08/2025, 21:04

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನಡೆಯುತ್ತಿರುವ ಅಸ್ತಿಪಂಜರ ಶೋಧ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ ಗ್ರೌಂಡ್ ಪೆನೇಟ್ರೇಟಿಂಗ್ ರೇಡಾರ್‌ಗಳನ್ನು (ಜಿಪಿಆರ್) ಬಳಸುವಂತೆ ಅನನ್ಯಾ ಭಟ್ ತಾಯಿ ಸುಜಾತಾ ಭಟ್ ಅವರ ವಕೀಲರಾದ ಮಂಜುನಾಥ್ ಎನ್. ಒತ್ತಾಯಿಸಿದ್ದಾರೆ.
ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಎನ್. ಅವರು ಸಾಕ್ಷಿ ದೂರುದಾರ ಈಗಾಗಲೇ ತೋರಿಸಿ ಅಗೆಸಿರುವ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಭಾರತದಲ್ಲಿ ಬಳಕೆಯಲ್ಲಿರುವ ಅತ್ಯಾಧುನಿಕ ಜಿಪಿಆರ್ ಬಳಸಿ ಕಳೇಬರಗಳ ಪತ್ತೆ ಕಾರ್ಯಾಚರಣೆ ನಡೆಸುವಂತೆ ಎಸ್‌ಐಟಿ ತಂಡಕ್ಕೆ ಮನವಿ ಮಾಡಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿ ದೂರುದಾರ ತೋರಿಸಿರುವ 10 ಸ್ಥಳಗಳಲ್ಲಿ ಅಗೆದಾಗ ಕೆಲವು ಸ್ಥಳಗಳಲ್ಲಿ ಕಳೇಬರಗಳು ಪತ್ತೆಯಾಗಿವೆ ಎಂಬುದು ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ಸಾಕ್ಷಿಯೇ ಹೇಳಿರುವಂತೆ, ಆತ ಧರ್ಮಸ್ಥಳವನ್ನು 2014ರಲ್ಲಿಯೇ ತೊರೆದಿದ್ದಾನೆ. ಅಪಾರ ಮಳೆಯನ್ನು ಕಾಣುವ ಧರ್ಮಸ್ಥಳ ಪ್ರದೇಶದಲ್ಲಿ ಮಣ್ಣು ಒಂದೆಡೆಯಿಂದ ಮತ್ತೊಂದೆಡೆಗೆ ಹರಿದು ಶೇಖರಣೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಸುಮಾರು 11 ವರ್ಷಗಳಲ್ಲಿ ಅರಣ್ಯ ಪ್ರದೇಶದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಈ ಕಾರಣಕ್ಕೆ ಸಾಕ್ಷಿದಾರ ತನ್ನ ನೆನಪಿನಲ್ಲಿ ಇಟ್ಟುಕೊಂಡ ಗುರುತುಗಳಲ್ಲಿ ಬದಲಾವಣೆಯಾಗಿರುವ ಸಾಧ್ಯತೆಯೂ ಅಧಿಕವಾಗಿದೆ. ಆದ್ದರಿಂದ, ನಾವು ಈಗಾಗಲೇ (ಜುಲೈ 29ರಂದು) ಮನವಿ ಮಾಡಿಕೊಂಡಂತೆ, ಸದ್ಯ ಅಗೆಯಲಾಗಿರುವ ಸ್ಥಳಗಳಲ್ಲಿ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಕಳೇಬರಗಳ ಪತ್ತೆಗೆ ಅತ್ಯಾಧುನಿಕ ಗ್ರೌಂಡ್ ಪೆನೇಟ್ರೇಟಿಂಗ್ ರೇಡಾರ್‌ಗಳನ್ನು (ಜಿಪಿಆರ್) ಬಳಸುವಂತೆ ಕೇಳಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.
ಹುಲ್ಲುಕಡ್ಡಿಯನ್ನು ತೆರವುಗೊಳಿಸಲು ಉಪಯೋಗಿಸುವ ಯಂತ್ರದಷ್ಟು ಗಾತ್ರವಿರುವ ಈ ಜಿಪಿಆರ್‌ಗಳನ್ನು ಕೆಲವೇ ವ್ಯಕ್ತಿಗಳನ್ನು ನಿಯೋಜಿಸಿ ಬಳಸಬಹುದು. ಆದ್ದರಿಂದ ದೂರುದಾರ ಗುರುತಿಸಿರುವ ಜಾಗಗಳ ಪೈಕಿ ಈಗಾಗಲೇ ಅಗೆದಿರುವ ಸ್ಥಳಗಳಲ್ಲಿ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಕಳೇಬರಗಳ ಪತ್ತೆಗೆ ಜಿಪಿಆರ್ ಬಳಸಬೇಕು ಎಂದು ವಕೀಲ ಮಂಜುನಾಥ್ ಎನ್. ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು