ಇತ್ತೀಚಿನ ಸುದ್ದಿ
ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ
08/08/2025, 11:06

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಗ್ರಾಮದ ಪಾಂಗಳ ಬಳಿ ಯೂಟ್ಯೂಬರ್ ಗಳ ಮೇಲೆ ಗೂಂಡಾಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸೋಮನಾಥ ಸಫಲ್ಯ(50) ಬಂಧಿತ ಆರೋಪಿ. ಧರ್ಮಸ್ಥಳ ಗ್ರಾಮದ ನಿವಾಸಿಯಾದ ಈತನನ್ನು ಕೊಕ್ಕಡದಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬಿಗ್ ಬಾಸ್ ಸ್ಪರ್ಧಿ ರಜತ್ ಅವರು ಹತ್ಯೆಗೀಡಾದ ಸೌಜನ್ಯ ಅವರ ಮನೆಗೆ ಭೇಟಿ ನೀಡಿ ವಾಪಸಾಗುವಾಗ ಯೂಟ್ಯೂಬರ್ ಗಳು ಅವರ ಸಂದರ್ಶನಕ್ಕೆ ಪಾಂಗಾಳಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಗೂಂಡಾಗಳು ಕುಡ್ಲ ರಾಂಪೇಜ್ ನ ಅಜಯ್ ಸೇರಿದಂತೆ ನಾಲ್ವರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದಿಸಿದ್ದರು.