5:57 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಮತಗಳ್ಳತ; ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

08/08/2025, 18:45

*ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ: ಸಿಎಂ ಸಿದ್ದರಾಮಯ್ಯ*

*ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ: ಸಿಎಂ*

ಬೆಂಗಳೂರು(reporterkarnataka.com): ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು.
ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧ
ಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ ಮಾಡಿ, ಮತದಾನದ ಅಂಕಿ ಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಿ ದಾಖಲೆಗಳ ಸಮೇತ ದೇಶದ ಜನರ ಮುಂದೆ ಇಟ್ಟಿದ್ದಾರೆ ಎಂದು ವಿವರಿಸಿದರು.
ಚುನಾವಣಾ ಆಯೋಗ ಸಂವಿಧಾನದಡಿಯಲ್ಲಿ ನ್ಯಾಯಬದ್ದವಾಗಿ ನಡೆದುಕೊಳ್ಳಬೇಕು. ಸಂವಿಧಾನ ಕೊಟ್ಟಿರುವ ಮತದಾನದ ಮೂಲಭೂತ ಹಕ್ಕನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ದೇಶದ ಜನತೆ ಅವಕಾಶ ಕೊಡುವುದಿಲ್ಲ ಎಂದರು.
ಮನುವಾದಿಗಳು ಸಂವಿಧಾನ ವಿರೋಧಿಗಳು. ಇವರು ಸಂವಿಧಾನದ ಪ್ರಕ್ರಿಯೆಯನ್ನೇ ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ವಂಚನೆ ಕಾರಣದಿಂದ ಸೆಂಟ್ರಲ್ ಲೊಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತಿದೆಯೇ ಹೊರತು ಜನಾಭಿಪ್ರಾಯ ಕಾಂಗ್ರೆಸ್ ಪರವಾಗಿಯೇ ಇತ್ತು ಎನ್ನುವುದು ಈಗ ಗೊತ್ತಾಗಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 14 ಸೀಟುಗಳನ್ನು ಗೆಲ್ಲಬೇಕಿತ್ತು. ಆದರೆ ಮತಕಳ್ಳತನದ ಕಾರಣದಿಂದ ನಾವು ಸೋತಿದ್ದೇವೆ. EVM ಬಂದ ಮೇಲೆ ಇವನ್ನು ದುರುಯೋಗ ಮಾಡಿಕೊಳ್ಳುವ ಕೆಲಸ ಆಗುತ್ತಿರುವುದು ಈಗ ದಾಖಲೆ ಸಮೇತ ಸಿಕ್ಕಿಬಿದ್ದಿದ್ದಾರೆ ಎಂದರು.
ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ. ಇದಕ್ಕೆ ಇಡೀ ರಾಜ್ಯದ ಜನತೆ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದು ಘೋಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು