ಇತ್ತೀಚಿನ ಸುದ್ದಿ
Chikkamagaluru | ರಾಜ್ಯದಲ್ಲಿ ಮತ್ತೊಂದು ಹುಲಿ ಸಾವು: ಎರಡು ವ್ಯಾಘ್ರಗಳ ಕಾದಾಟದಲ್ಲಿ ಮೃತಪಟ್ಟಿರುವ ಶಂಕೆ
08/08/2025, 21:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ರಾಜ್ಯದಲ್ಲಿ ಮತ್ತೊಂದು ಹುಲಿ ಸಾವನ್ನಪ್ಪಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ವಲಯದ ಕೂಟ್ ರಸ್ತೆಯಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ.
ಕಾದಾಟದಲ್ಲಿ ಹುಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಭದ್ರಾ ಅಭಯಾರಣ್ಯದ ಹುಲಿ ಮೀಸಲು ಪ್ರದೇಶದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಗಸ್ತು ತಿರುಗುತ್ತಿದ್ದ ಸಿಬ್ಬಂದಿಗಳ ಕಣ್ಣಿಗೆ ಹುಲಿಯ ಕಳೆಬರಹ ಬಿದ್ದಿದೆ. ಸುಮಾರು 7 ವರ್ಷ ಪ್ರಾಯದ ಹೆಣ್ಣು ಹುಲಿಯ ಮೃತದೇಹ ಇದಾಗಿದೆ.ಎರಡು ಹುಲಿಗಳ ಮಧ್ಯೆ ಕಾದಾಟದಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.ಮೃತಪಟ್ಟಿರುವ ಹುಲಿಯ ದೇಹದ ಮೇಲೆ ಕಾದಾಟ ನಡೆಸಿರುವ ಗಾಯದ ಗುರುತು ಪತ್ತೆಯಾಗಿದೆ.
ಸ್ಥಳಕ್ಕೆ ಹಿರಿಯ ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ, ರಕ್ತ ಮಾದರಿ, ದೇಹದ ಕೆಲ ಭಾಗ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ.