10:39 PM Thursday20 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

Mangaluru | ಆ.10: ಕಲಾಸಾಧನದಿಂದ ‘ಸ್ವರಧಾರ’ ಸಂಗೀತ ಉತ್ಸವ

08/08/2025, 22:16

ಮಂಗಳೂರು(reporterkarnataka.com): ಮಂಗಳೂರು ಕಲಾ ಸಾಧನ ವತಿಯಿಂದ
ಸ್ವರಧಾರಾ ಸಂಗೀತ ಉತ್ಸವ ಆ.10ರಂದು ಸಂಜೆ 5 ಗಂಟೆಯಿಂದ ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ನಡೆಯಲಿದೆ.
ಉತ್ಸವದಲ್ಲಿ ಪ್ರಸಿದ್ಧ ಹಿಂದೂಸ್ತಾನಿ ಗಾಯಕ ಸಂಗೀತ ನಾಟಕ ಅಕಾಡೆಮಿ ನವದೆಹಲಿಯಿಂದ ಭಾರತರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್, ಯುವ ಪುರಸ್ಕಾರ ಪಂಡಿತ್ ಕುಮಾರ್ ಮರ್ದೂರ್ ಭಾಗವಹಿಸಲಿದ್ದಾರೆ. ಕುಮಾರ್ ಅವರು ಕಿರಾಣಾ, ಗ್ವಾಲಿಯರ್ ಮತ್ತು ಜೈಪುರ ಘರಾಣೆಗಳ ಶೈಲಿಗಳನ್ನು ಬೆರೆಸಿ ತಮ್ಮದೇ ಆದ ಗಾಯನವನ್ನು ರಚಿಸಿ ದೇಶ ವಿದೇಶಗಳಲ್ಲಿ ಖ್ಯಾತಿ ಪಡೆದವರು. ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಸೋಮನಾಥ ಮರ್ದೂರರ ಫುತ್ರ.


ಕುಮಾರ್ 2011ರಿಂದ 2021 ರವರೆಗೆ 10 ವರ್ಷಗಳ ಕಾಲ ಕೋಲ್ಕತ್ತಾದ ಐಟಿಸಿ-ಸಂಗೀತ ಸಂಶೋಧನಾ ಅಕಾಡೆಮಿಯಲ್ಲಿ ಬೋಧನಾ ಅಧ್ಯಾಪಕರಾಗಿ ಸೇವೆ ಸಲ್ಲಿಸಿದವರು. ಅಮೆರಿಕ ಸಂಯುಕ್ತ ಸಂಸ್ಥಾನ, ಕೆನಡಾ, ಸಿಂಗಾಪುರ, ಬಾಂಗ್ಲಾ ದೇಶಗಳಲ್ಲಿ ಕಾರ್ಯ ನೀಡಿ ಖ್ಯಾತಿ ಪಡೆದವರು. ಉತ್ಸವದಲ್ಲಿ ಅಕ್ಷಯ ಜೋಶಿ ಧಾರವಾಡ್ ತಬಲಾ ಮತ್ತು ಸತೀಶ್ ಭಟ್ ಹೆಗ್ಗಾರ್ ಹಾರ್ಮೊನಿಯಂ ಸಾಥ್ ನೀಡಲಿದ್ದಾರೆ ಎಂದು ಕಲಾ ಸಾಧನ ಕೇಂದ್ರದ ನಿರ್ದೇಶಕಿ ವಿಭಾ ಶ್ರೀನಿವಾಸ ನಾಯಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ನೆರವೇರಿಸಲಿದ್ದಾರೆ.
ಪತ್ರಿಕಾಗೋಷ್ಠಿ ಯಲ್ಲಿ ಸಂಸ್ಥೆಯ ಗೌರವ ಸಲಹೆಗಾರ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು