8:59 PM Sunday10 - August 2025
ಬ್ರೇಕಿಂಗ್ ನ್ಯೂಸ್
ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್… ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ

ಇತ್ತೀಚಿನ ಸುದ್ದಿ

ಗಯಾನಾ ದೇಶದಲ್ಲಿ ಮೃತಪಟ್ಟ ಅನಿವಾಸಿ ಭಾರತೀಯ ಕೊಡಗಿನ ಗಿರೀಶ್ ಪಾಲೆ ಮೃತದೇಹ ಕೊನೆಗೂ ತಾಯ್ನಾಡಿಗೆ ಆಗಮನ

09/08/2025, 19:23

ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮದ ನಿವಾಸಿಯಾದ ಪಿ.ಬಿ ಗಿರೀಶ ಬಾಬು ಪಾಲೆ ರವರು ದಕ್ಷಿಣ ಅಮೆರಿಕಾದ ಗಯಾನಾ ದೇಶದ ಶರಿಫ್ ಜನರಲ್ ಆಸ್ಪತ್ರೆಯಲ್ಲಿ ಬಹು ಅನಿಯಮಿತ ರಕ್ತಸ್ರಾವದ ಹೃದಯಘಾತದಿಂದ ಜುಲೈ 14, 2025 ರಂದು ಸಾವನ್ನಪ್ಪಿದ್ದು, ಅನಿವಾಸಿ ಭಾರತೀಯ ಸಮಿತಿಯು ಆಸ್ಪತ್ರೆ ಹಾಗು ಭಾರತೀಯ ರಾಯಭಾರಿ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪಿ.ಬಿ. ಗಿರೀಶ ಬಾಬು ಪಾಲೆ ರವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರುವ ಕ್ರಮವಹಿಸಲಾಗಿತ್ತು.
ಕರ್ನಾಟಕ ಸರ್ಕಾರದ ವತಿಯಿಂದ ರೂ 3.6 ಲಕ್ಷವನ್ನು ಮಂಜೂರು ಮಾಡಿದ್ದು, ಉಳಿಕೆ ಹಣವನ್ನು ಪಿ.ಬಿ.ಗಿರೀಶ ಬಾಬು ಪಾಲೆ ರವರು ಕೆಲಸ ಮಾಡುತ್ತಿದ್ದ ಶೆರಿಫ್ ಜನರಲ್ ಆಸ್ಪತ್ರೆಯವರು ಭರಿಸಿರುತ್ತಾರೆ. ಗಯಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹಾಗೂ ನವ ದೆಹಲಿಯಲ್ಲಿರುವ ನಿವಾಸಿ ಆಯುಕ್ತರು ಮೃತದೇಹವನ್ನು ಭಾರತಕ್ಕೆ ತರುವುದನ್ನು ಸಂಯೋಜಿಸಿ ಆಗಸ್ಟ್ 5, 2025ರ ರಾತ್ರಿ 11:30 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತು.
ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಡಾ. ಆರತಿಕೃಷ್ಣ ಮತ್ತು ಸಿಬ್ಬಂದಿ ಮೃತದೇಹವನ್ನು ಸ್ವೀಕರಿಸಿ ಮೃತರ ಪತ್ನಿ ಜಾನಕಿ ರವರಿಗೆ ಹಸ್ತಾಂತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು