8:54 AM Sunday25 - January 2026
ಬ್ರೇಕಿಂಗ್ ನ್ಯೂಸ್
ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ: ದೆಹಲಿಗೆ ವಾಪಸ್ಸಾದ ಪ್ರಧಾನಿ ನರೇಂದ್ರ ಮೋದಿ

10/08/2025, 18:37

ಬೆಂಗಳೂರು (reporterkarnataka.com): ಕರ್ನಾಟಕ ಸರ್ಕಾರ, ವಸತಿ ಮತ್ತು ಕೇಂದ್ರ ನಗರ ವ್ಯವಹಾರಗಳ ಸಚಿವಾಲಯ ಹಾಗೂ ಕೇಂದ್ರ ರೈಲ್ವೆ ಮಂಡಳಿ ಮತ್ತು ರೈಲ್ವೇ ಸಚಿವಾಲಯದ ವತಿಯಿಂದ ಇಂದು ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು ಮೆಟ್ರೋ ಹಂತ 2ರ ಹಳದಿ ಮಾರ್ಗ ಉದ್ಘಾಟನೆ,ಬೆಂಗಳೂರು ಮೆಟ್ರೋ ಹಂತ 3 ರ ಶಂಕುಸ್ಥಾಪನೆ, ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ವಾಪಸ್ಸಾದರು.


ಗೌರವಾನ್ವಿತ ಪ್ರಧಾನ ಮಂತ್ರಿಗಳನ್ನು ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷ ನಾಯಕರಾದ ಛಲವಾದಿ ಟಿ. ‌ನಾರಾಯಣಸ್ವಾಮಿ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಎಂ.ಎ. ಸಲೀಂ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ. ಜಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು