5:09 AM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಮತಗಳ್ಳತನಕ್ಕೆ ಸಾಕ್ಷಿ ಇಟ್ಟುಕೊಂಡು ಆಯೋಗಕ್ಕೆ ದೂರು ನೀಡಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

10/08/2025, 23:42

ಹಾವೇರಿ(reporterkarnataka.com): ಮತ‌ಗಳ್ಳತನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನವರು ಸಾಕ್ಷಿ, ಆಧಾರ ಇಟ್ಟುಕೊಂಡು ಚುನಾವಣಾ ಆಯೋಗಕ್ಕೆ ದೂರು ನೀಡಲಿ, ಈ ಬಗ್ಗೆ ತನಿಖೆ ಆಗಲಿ, ನಾನು ಸ್ವಾಗತ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಹಾವೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಕತ್ತಲಲ್ಲಿ ಕಾಣದೇ ಇರುವ ಕರಿಬೆಕ್ಕು ಹುಡುಕುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಇದೇ ವೇಳೆ ವಿಷ್ಣುವರ್ಧನ್ ಸ್ಮಾರಕ ತೆರವು ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಷ್ಣುವರ್ಧನ್ ಬಗ್ಗೆ ಅಭಿಮಾನ ಇದೆ. ರಾತ್ರೋರಾತ್ರಿ ಅವರ ಸ್ಮಾರಕ ತೆರವು ಮಾಡಿದ್ದು ದುಃಖ ತಂದಿದೆ ಎಂದರು.
ನಾನು ಮುಖ್ಯಮಂತ್ರಿ ಆಗಿದ್ದಾಗ ಮೈಸೂರಿನಲ್ಲಿ ವಿಷ್ಣು ಸ್ಮಾರಕ ಉದ್ಘಾಟನೆ ಮಾಡಿದ್ದೇವು. ಅದಕ್ಕೆ 12 ಕೋಟಿ ರೂ ಕೊಡಲಾಗಿತ್ತು. ಈ ಸಮಸ್ಯೆ ಸೌಹಾರ್ದ ರೀತಿ ಬಗೆಹರಿಸುವುದು ಸೂಕ್ತ ಅಂತ ನನ್ನ ಅಭಿಪ್ರಾಯ ಎಂದು ಹೇಳಿದರು.

*ನದಿ ಜೋಡಣೆ:*
ಹಾವೇರಿ, ಗದಗ, ಕೊಪ್ಪಳ, ರಾಯಚೂರು ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇದೆ. ಜಲಾನಯನ ಪ್ರದೇಶದಲ್ಲಿ ಹಲವು ಕುಡಿಯುವ ನೀರಿನ ಯೋಜನೆ‌ಗಳಿವೆ. ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಆಗುತ್ತದೆ. ನೀರಿನ ಕೊರತೆ ತುಂಬಿಕೊಡಲು ಬೇಡ್ತಿ-ವರದಾ ನದಿ‌ ಜೋಡಣೆ ಯೋಜನೆ ಮಾಡುವ ಉದ್ದೇಶವಿದೆ ಎಂದು ಹೇಳಿದರು.
ಈ ಯೋಜನೆಯಿಂದ ಉತ್ತರ ಕನ್ನಡ ಜಿಲ್ಲೆಯವರಿಗೆ ಪರಿಸರದ ಸಮಸ್ಯೆ, ಜೀವ ವೈವಿಧ್ಯಕ್ಕೆ ಸಮಸ್ಯೆ ಆಗುತ್ತದೆ ಅಂತ ಹಿಂದೆಲ್ಲಾ ಚರ್ಚೆ ಆಗಿದ್ದವು. ನಾನು ಮೊನ್ನೆ ಕೇಂದ್ರ ಸಚಿವರಾದ ಸಿ.ಆರ್.ಪಾಟೀಲ್, ಸೋಮಣ್ಣ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ವರದಾ ಬೇಡ್ತಿ ಯೋಜನೆಗೆ ಒಪ್ಪಿಗೆ ಕೊಡಲು ಎಲ್ಲರೂ ಸಹಮತ ವ್ಯಕ್ತಪಡಿಸಿದ್ದಾರೆ. ಕೆಲವೇ ದಿನಗಳಲ್ಲಿ ಒಳ್ಳೆ ಸುದ್ದಿ ಬರುವ ನಿರೀಕ್ಷೆ ಇದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಡಿಪಿಆರ್ ಕಳಿಸಿದರೆ ಮುಂದಿನ ಪ್ರಕ್ರಿಯೆ ಆಗುತ್ತದೆ. ವರದಾ, ಧರ್ಮ, ಬೇಡ್ತಿ ನದಿ ನೀರಿನ ಲಿಂಕ್ ರಾಜ್ಯ ಸರ್ಕಾರದ ವಲಯದಲ್ಲಿ ತಗೋಬೇಕು. ನೀರಾವರಿ ಯೋಜನೆ ಜಾರಿ ಅಷ್ಟು ಸುಲಭ ಅಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಲು ಇಂದು ಸಭೆ ನಡೆಸಿದ್ದೇವೆ ಎಂದು ನುಡಿದರು.
ಬೆಡ್ತಿ ವರದಾ ನದಿ ಜೋಡಣೆ ಯೋಜನೆಗೆ ಶಾಸಕ ಶಿವರಾಮ ಹೆಬ್ಬಾರ್ ವಿರೋಧಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಲ್ಲಿನ ಜನರ ಬದುಕು ಹಾಳಾಗುವುದಿಲ್ಲ. ಯೋಜನೆಯಲ್ಲಿ ಬದಲಾವಣೆ ಆಗಿದೆ. ಅವರನ್ನೂ ಒಪ್ಪಿಸಿ ಅನುಕೂಲ ಆಗುವ ರೀತಿ ಮಾಡುತ್ತೇವೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು