4:37 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Mysore | ಬಂಡೀಪುರ: ಪ್ರವಾಸಿಗನ ಮೇಲೆ ಕಾಡಾನೆ ದಾಳಿ: ಕಾಲಿನಡಿಗೆ ಸಿಲುಕಿಯೂ ಪಾರಾದ ಪ್ರವಾಸಿಗ!; ವೀಡಿಯೋ ವೈರಲ್

11/08/2025, 12:46

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಮುಂದಾದ ಪ್ರವಾಸಿಗನನ್ನು ಕಾಡಾನೆಯೊಂದು ಅಟ್ಟಾಡಿಸಿ ತುಳಿಯಲು ಯತ್ನಿಸಿದ ಘಟನೆ ಬಂಡೀಪುರದ ಕೆಕ್ಕನಹಳ್ಳ ಚೆಕ್‌ಪೋಸ್ಟ್ ನಡುವಿನ ಕಾಡಿನ ರಸ್ತೆಯಲ್ಲಿ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.


ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಕೇರಳದ ಪ್ರವಾಸಿಗನೊಬ್ಬನ ಮೇಲೆ ಕಾಡಾನೆ ದಾಳಿ ನಡೆಸಿದೆ. ವಾಹನಗಳು ಮತ್ತು ಜನರಿಂದ ತುಂಬಿದ್ದ ರಸ್ತೆಯಲ್ಲಿ ಆನೆ ನಿಂತಿದ್ದು, ಈ ವೇಳೆ ಪ್ರವಾಸಿಗ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಯತ್ನಿಸಿದ್ದಾನೆ.
ಈ ವೇಳೆ ಆನೆ ಪ್ರವಾಸಿಗನನ್ನು ಓಡಿಸಿಕೊಂಡು ಹೋಗಿದ್ದು, ಕೆಲಕಾಲ ಅಟ್ಟಾಡಿಸಿದೆ. ಓಡುವ ವೇಳೆ ಪ್ರವಾಸಿಗ ಕಾಲು ಜಾರಿ ಬಿದ್ದಿದ್ದು, ಆನೆಯ ಕಾಲಿನ ಕೆಳಗೆ ಸಿಲುಕಿಕೊಂಡಿದ್ದಾನೆ. ಬಳಿಕ ಆನೆ ತುಳಿಯಲು ಯತ್ನಿಸಿ ಸ್ಥಳದಿಂದ ಹೊರಟು ಹೋಗಿದೆ. ಪರಿಣಾಮ ಅದೃಷ್ಟವಶಾತ್ ಪ್ರವಾಸಿಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವೀಡಿಯೋ ವೈರಲ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು