9:27 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

11/08/2025, 20:23

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿಶ್ವವಿಖ್ಯಾತ ನಾಡಹಬ್ಬ ದಸರಾದ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅಭಿಮನ್ಯು ನೇತೃತ್ವದ ಮೊದಲ ತಂಡದ 9 ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಯಿತು.
ಈ ತೂಕ ಪರೀಕ್ಷೆಯಲ್ಲಿ 25 ವರ್ಷದ ಭೀಮನೇ ಅತೀ ಹೆಚ್ಚು ತೂಕ ಹೊಂದಿರುವ ಆನೆಯಾಗಿದ್ದು, ಆನಂತರ ಜಂಬೂ ಸವಾರಿ ಕ್ಯಾಪ್ಟನ್ ಅಭಿಮನ್ಯು 2ನೇ ಸ್ಥಾನದಲ್ಲಿದೆ.
ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಹುಣಸೂರಿನ ವೀರನ ಹೊಸಹಳ್ಳಿ ಮೂಲಕ ಆಗಮಿಸಿರುವ ಮೊದಲ ಹಂತದ ಅಭಿಮನ್ಯು ನೇತೃತ್ವದ ಗಜಪಡೆಗೆ ನಗರದ ಧನ್ವಂತರಿ ರಸ್ತೆಯಲ್ಲಿರುವ ತೂಕ ಕೇಂದ್ರದಲ್ಲಿ ತೂಕ ಪರೀಕ್ಷೆ ನಡೆಸಲಾಯಿತು.
*9 ಆನೆಗಳ ತೂಕದ ವಿವರ:* ಅಭಿಮನ್ಯು – 5,360 ಕೆ.ಜಿ., ಧನಂಜಯ – 5,310 ಕೆ.ಜಿ., ಕಾವೇರಿ – 3,010 ಕೆ.ಜಿ., ಲಕ್ಷ್ಮಿ – 3,730 ಕೆ.ಜಿ., ಭೀಮ – 5,465 ಕೆ.ಜಿ., ಏಕಲವ್ಯ – 5,305 ಕೆ.ಜಿ., ಮಹೇಂದ್ರ – 5,120 ಕೆ.ಜಿ., ಕಂಜನ್ – 4,880 ಕೆ.ಜಿ., ಪ್ರಶಾಂತ – 5,110 ಕೆ.ಜಿ. ತೂಕ ಹೊಂದಿದ್ದಾರೆ.
“ಈ ಬಾರಿ ದಸರಾದಲ್ಲಿ ಭಾಗವಹಿಸಲು ಆಗಮಿಸಿರುವ ಅಭಿಮನ್ಯು ನೇತೃತ್ವದ 9 ಆನೆಗಳ ತೂಕ ಪರೀಕ್ಷೆ ಮಾಡಲಾಗಿದ್ದು, ಎಲ್ಲ ಆನೆಗಳು ಆರೋಗ್ಯವಾಗಿವೆ. ಕಳೆದ ಬಾರಿ ದಸರಾದಲ್ಲಿ ಭಾಗವಹಿಸಿ ವಾಪಸ್ ಕಾಡಿಗೆ ಹೋಗುವಾಗ ಇದ್ದ ತೂಕವನ್ನೇ ಉಳಿಸಿಕೊಂಡಿರುವ ಆನೆಗಳು ಎಲ್ಲವೂ ಆರೋಗ್ಯವಾಗಿದೆ,
ಆನೆಗಳ ಆರೋಗ್ಯ ಹಾಗೂ ಜಂಬೂಸವಾರಿ ಮೆರವಣಿಗೆಗೆ ಯಾವ ರೀತಿ ಪ್ರೋಟೀನ್​ಗಳು, ವಿಶೇಷ ಆಹಾರ ನೀಡಬೇಕು ಎಂಬುದನ್ನು ತಿಳಿಯಲು ಇಂದು ತೂಕ ಪರೀಕ್ಷೆ ಮಾಡಲಾಯಿತು. ಅರಣ್ಯಭವನದಲ್ಲಿ ವೈದ್ಯರ ಮೀಟಿಂಗ್ ಮಾಡಿ ಅಂತಿಮವಾಗಿ ಯಾವ ರೀತಿ ಆಹಾರ ನೀಡಬೇಕು ಎಂಬುದನ್ನು ತೀರ್ಮಾನ ಮಾಡಲಾಗುತ್ತದೆ. ಅದರಂತೆ ನಾಳೆಯಿಂದ ವಿಶೇಷ ಆಹಾರ ಜೊತೆಗೆ ತಾಲೀಮು ನಡೆಸಲಾಗುವುದು ಎಂದು ಡಿಸಿ ಎಫ್ ಪ್ರಭುಗೌಡ ತಿಳಿಸಿದ್ದಾರೆ.
ಗಜಪಡೆ ಅರಮನೆಯಲ್ಲಿ ವಾಸ್ತವ್ಯ ಹೂಡಲಿದೆ. 9 ಆನೆಗಳು ಅರಮನೆಯ ಮುಂಭಾಗದ ಕೋಡಿ ಸೋಮೇಶ್ವರ ದೇವಾಲಯದ ಆವರಣದಲ್ಲಿ ವಾಸ್ತವ್ಯ ಹೂಡಿವೆ.
ಎರಡು ತಿಂಗಳುಗಳ ಕಾಲ ಇಲ್ಲೇ ಇರುವ ಗಜಪಡೆ ಜಂಬೂಸವಾರಿ ಮೆರವಣಿಗೆ ಮುಗಿಸಿಕೊಂಡು ಕಾಡಿಗೆ ಮರಳುತ್ತವೆ. ಈ ಮಧ್ಯೆ ಗಜಪಡೆಯನ್ನು ನಿತ್ಯ ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ತಾಲೀಮು ನಡೆಸಲಾಗುತ್ತದೆ. ಜೊತೆ ಗಜಪಡೆಗೆ ವಿಶೇಷ ಆಹಾರ ನೀಡಲಾಗುತ್ತದೆ. ಈ ಬಾರಿಯೂ ಸಹ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದಾನೆ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು