8:54 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿಗೆ ಕ್ರಮ: ವಿಧಾನ ಪರಿಷತ್ ನಲ್ಲಿ ಸರಕಾರದ ಭರವಸೆ

12/08/2025, 20:02

ಬೆಂಗಳೂರು (reporterkarnataka.com): ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿಗೆ ಕ್ರಮವಹಿಸಲಾಗುವುದೆಂದು ಸಚಿವ ಈಶ್ವರ್ ಖಂಡ್ರೆವಿಧಾನ ಪರಿಷತ್ ನಲ್ಲಿ ಇಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಡಾ‌. ಎಂ.ಜಿ.ಮುಳೆ ಅವರು ನಿಯಮ 72 ರ ಗಮನ ಸೆಳೆಯುವ ಸೂಚನೆಯಡಿ ಬಸವ ಕಲ್ಯಾಣ ಅಭಿವೃಧ್ದಿಗೆ ಅನುದಾನ‌ ಕೊರತೆ ಕುರಿತಂತೆ ಕೇಳಲಾದ ಪ್ರಶ್ನೆಗೆ ಕಂದಾಯ ಸಚಿವರ ಪರವಾಗಿ ಉತ್ತರಿಸಿದ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ, ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿಗಾಗಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ರಚನೆಯಾಗಿದ್ದು, ಇಲ್ಲಿಯವರೆಗೆ 17 ಸ್ಮಾರಕಗಳನ್ನು ಅಭಿವೃದ್ದಿ ಪಡಿಸಲಾಗಿದ್ದು, ಉಳಿದ ಸ್ಮಾರಕಗಳ ಅಭಿವೃದ್ಧಿಯನ್ನು ಅನುದಾನದ ಲಭ್ಯತೆಗೆ ಅನುಗುಣವಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. 26-06-2025 ರಲ್ಲಿ ನೂತನ ಅನುಭವ ಮಂಟಪ ನಿರ್ಮಾಣ ಯೋಜನೆ ಪರಿಷ್ಕೃತ ಗೊಂಡಿದ್ದು, 742 ಕೋಟಿಗಳಿಗೆ ಅನುಮೋದನೆ ನೀಡಲಾಗಿದ್ದು, ಸರ್ಕಾರ ಇದುವರೆಗೆ 325 ಕೋಟಿ ಬಿಡುಗಡೆ ಮಾಡಿದ್ದು ಕಾಮಗಾರಿ ಪ್ರಗತಿಯಲ್ಲಿದೆ ಎಂದರು
ಶರಣರ ವಚನಗಳ ಸಂಗ್ರಹ ಕಾರ್ಯ ಪೂರ್ಣಗೊಂಡಿದ್ದು, ಅದನ್ನು ಧ್ವನಿ ಮತ್ತು ದೃಶ್ಯ ಮಾಧ್ಯಮಗಳ ಮೂಲಕ ನೂತನ ಅನುಭವ ಮಂಟಪದ ಒಳಾಂಗಣದಲ್ಲಿ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಬಸವ ವನ ಉದ್ಯಾನವನದ ಸುತ್ತ ತಡೆಗೋಡೆಯನ್ನು ಸಹ ನಿರ್ಮಿಸಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು