6:39 AM Saturday10 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ; ಎಸ್ಐಟಿ ರಚಿಸಿ, ಅಗೆದು ಗುಡ್ಡೆ ಹಾಕಿದ್ದೊಂದೇ ಬಂತು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿ

13/08/2025, 18:56

* ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆಂದು ಈಗ ಉಲ್ಟಾ

* ಏನೂ ಸಿಗದಿದ್ದಕ್ಕೆ ʼಸರ್ಕಾರದ ಪಾತ್ರವಿಲ್ಲʼ ಎನ್ನುತ್ತಿರೋ ಸಿಎಂ

ನವದೆಹಲಿ(reporterkarnataka.com): ಧರ್ಮಸ್ಥಳ ವಿಚಾರದಲ್ಲಿ ಸೂಕ್ಷ್ಮವಾಗಿ ವರ್ತಿಸಬೇಕಿದ್ದ ರಾಜ್ಯ ಸರ್ಕಾರ ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಂಡಿದೆ. ಏನೊಂದೂ ಸಿಗದಿದ್ದಕ್ಕೆ ಮುಖ್ಯಮಂತ್ರಿ ಈಗ ವರಸೆ ಬದಲಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಲ್‌ಪಿ ಸಭೆಯಲ್ಲಿ ʼಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ’ ಎಂದಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಸಚಿವರು, SIT ರಚಿಸಿದ್ದು ತಾವೇ ಅಲ್ಲವೇ? ಎಂದು ತಿರುಗೇಟು ಕೊಟ್ಟಿದ್ದಾರೆ.
SIT ರಚಿಸಿ ತನಿಖೆಗೆ ಆದೇಶಿಸಿದ ಸಿಎಂ ಈಗ ಸರ್ಕಾರದ ಪಾತ್ರವಿಲ್ಲವೆಂದು ಉಲ್ಟಾ ಹೊಡೆಯುತ್ತಿದ್ದಾರೆ. ಪರ-ವಿರೋಧ ಚರ್ಚೆಯ ನಡುವೆಯೇ ತರಾತುರಿಯಲ್ಲಿ SIT ರಚಿಸಿ ಉತ್ಖನನಕ್ಕೆ ಆದೇಶ ನೀಡಿದ್ದು ತಾವೇ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

*ಮಣ್ಣು ಅಗೆದಿದ್ದೊಂದೇ ಬಂತು!:* ಧರ್ಮಸ್ಥಳದ 13 ಸ್ಪಾಟ್ ಉತ್ಖನನ ಮಾಡಿದ ಜಾಗಗಳಲ್ಲಿ ಈವರೆಗೂ ಮಣ್ಣು ಅಗೆದಿದ್ದೊಂದೇ ಬಂತು. ಅನಾಮಿಕ ಆರೋಪಿಸಿದಂತೆ ಏನೊಂದೂ ಗುರುತರ ಸಾಕ್ಷಿ, ಶವಗಳ ಅವಶೇಷ ಸಿಗದಾಯಿತು. ಹೀಗಾಗಿ ಸಿಎಂ ಈಗ ತಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆಂಬ ಕಾರಣಕ್ಕೆ ʼಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ’ ಎನ್ನುತ್ತಿದ್ದಾರೆಂದು ಸಚಿವ ಜೋಶಿ ಟೀಕಿಸಿದ್ದಾರೆ.

*ಸಿಎಂ ಪಾತ್ರವಿಲ್ಲದೆ SIT ರಚನೆ ಆಯಿತಾ?:* ಧರ್ಮಸ್ಥಳ ಪ್ರಕರಣದಲ್ಲಿ ಸಿಎಂ ಪಾತ್ರವಿಲ್ಲದೆ SIT ರಚಿಸಲಾಯಿತೆ? ಎಂದು ಪ್ರಶ್ನಿಸಿದ ಜೋಶಿ, ಇಷ್ಟೆಲ್ಲಾ ಹೈಡ್ರಾಮಾ ಮಾಡುವ ಬದಲು ಸರಿಯಾಗಿ ಪೊಲೀಸ್ ತನಿಖೆ ನಡೆಸಬಹುದಿತ್ತು. ಆದರೆ ಅದೇನೋ ಅಗೆದು ಗುಡ್ಡೆ ಹಾಕುವ ಕೆಲಸ ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಹರಿ ಹಾಯ್ದಿದ್ದಾರೆ.
ಧರ್ಮಸ್ಥಳಕ್ಕೆ ತಲೆಮಾರಿನ ಇತಿಹಾಸವಿದೆ. ಈ ಪವಿತ್ರ ಕ್ಷೇತ್ರಕ್ಕೆ ಪ್ರತಿ ‌ದಿನ ಲಕ್ಷಾಂತರ ಜನರು ಭೇಟಿ‌ ನೀಡುತ್ತಾರೆ. ಆದರೆ ರಾಜ್ಯ ಸರ್ಕಾರ ಜನರ ನಂಬಿಕೆ ವಿಚಾರದಲ್ಲಿ ಆಟವಾಡುತ್ತಿದೆ. ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಳ್ಳುತ್ತಿದ್ದು, ತೀವ್ರ ಖಂಡನೀಯ ಎಂದಿದ್ದಾರೆ ಜೋಶಿ.
ದಟ್ಟಾರಣ್ಯ ಪ್ರದೇಶದ ನೇತ್ರಾವತಿ ಸ್ನಾನಘಟ್ಟದ 13 ಭಾಗಗಳಲ್ಲಿ ಶವಗಳನ್ನು ಹೂತು ಹಾಕಿದೆ ಎಂದಿರುವ ಅನಾಮಿಕನ ಆರೋಪದ ಬಗ್ಗೆ ಪರ-ವಿರೋಧ ಚರ್ಚೆ ನಡುವೆಯೇ SIT ರಚಿಸಿ, ಈಗ ಉತ್ಖನನ ಜಾಗದಲ್ಲಿ ಏನೂ ಸಿಗದಿದ್ದರಿಂದ ʼಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ’ ಎನ್ನುತ್ತಿರುವುದು ನಿಜಕ್ಕೂ ದುರಂತ ಹಾಗೂ ಖಂಡನೀಯ ಎಂದು ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು