8:32 PM Thursday14 - August 2025
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ…

ಇತ್ತೀಚಿನ ಸುದ್ದಿ

ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4 ಮಂದಿ ಆರೋಪಿಗಳ ಬಂಧನ

14/08/2025, 17:22

ಬೆಂಗಳೂರು(reporterkarnataka.com): ಕನ್ನಡ ಚಲನಚಿತ್ರ ನಟ ಹಾಗೂ ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ಆರೋಪಿಯಾಗಿರುವ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ. ಈ ನಡುವೆ ಇನ್ನೊರ್ವ ಪ್ರಮುಖ ಆರೋಪಿ ಪವಿತ್ರಾ ಗೌಡ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪವಿತ್ರಾ ಗೌಡ ಅವರನ್ನು ಆರ್. ಆರ್. ನಗರದ ಅವರ ನಿವಾಸದಿಂದ ಬಂಧಿಸಲಾಗಿದೆ.
ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು
ಸುಪ್ರೀಂಕೋರ್ಟ್​​ ಇಂದು ರದ್ದು ಮಾಡಿತ್ತು. ಇವತ್ತು ಬೆಳಗ್ಗೆ 10.45ಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜಾಮೀನು ಅರ್ಜಿಯ ತೀರ್ಪು ಹೊರಬಂದಿದೆ. ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಮತ್ತೆ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ‘ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್​ನನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಕೊರ್ಟ್ ಅಭಿಪ್ರಾಯಪಟ್ಟಿದೆ.
ದರ್ಶನ್ ಜೊತೆ ಪವಿತ್ರಾ ಗೌಡ, A6, ಜಗದೀಶ್ ಅಲಿಯಾಸ್ ಜಗ್ಗ, A7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೂಶ್, ಎ11 ನಾಗರಾಜು ಅಲಿಯಾಸ್ ನಾಗ, ಎ12 , ಲಕ್ಷ್ಮಣ್ ಜಾಮೀನು ಕೂಡ ರದ್ದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು