12:35 PM Friday3 - October 2025
ಬ್ರೇಕಿಂಗ್ ನ್ಯೂಸ್
ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ… ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ… ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ…

ಇತ್ತೀಚಿನ ಸುದ್ದಿ

Mangaluru | ಪಂಪವೆಲ್ ರೋಹನ್ ಸ್ಕ್ವೇರ್‌ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

15/08/2025, 13:32

ಮಂಗಳೂರು(reporterkarnataka.com): ಭಾರತದ 79ನೇ ಸ್ವಾತಂತ್ರ್ಯ ದಿನವನ್ನು ರೋಹನ್ ಕಾರ್ಪೋರೇಶನ್ ಸಂಸ್ಥೆ ಇಂದು ಪಂಪ್ ವೆಲ್‌ನ ರೋಹನ್ ಸ್ಕ್ವೇರ್ ಆವರಣದಲ್ಲಿ ಭವ್ಯವಾಗಿ ಆಚರಿಸಿತು.

ಕಾರ್ಯಕ್ರಮವು ಬೆಳಿಗ್ಗೆ 8 ಗಂಟೆಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ಸಂಸ್ಥೆಯ ಸಿಬ್ಬಂದಿಗಳು, ಕಾರ್ಮಿಕರು ಹಾಗೂ ಸ್ಥಳೀಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ರೋಹನ್ ಕಾರ್ಪೊರೇಷನ್ ಸಂಸ್ಥೆಯ ಸ್ಥಾಪಕರಾದ ರೋಹನ್ ಮೊಂತೆರೋರವರು, “ಸ್ವಾತಂತ್ರ್ಯವು ಕೇವಲ ಒಂದು ದಿನದ ಆಚರಣೆಯಲ್ಲ; ಪ್ರತಿದಿನವೂ ಅದನ್ನು ಕಾಪಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಯುವ ಪೀಳಿಗೆ ದೇಶಾಭಿವೃದ್ಧಿಯಲ್ಲಿ ತೊಡಗಿಕೊಳ್ಳುವುದು ಅತ್ಯವಶ್ಯಕ ” ಎಂದು ಹೇಳಿದರು.

ಈ ಸಂದರ್ಭದಲ್ಲಿ ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ಅವರು ರಾಷ್ಟ್ರಸೇವೆಗೆ ಸಲ್ಲಿಸಿದ ಮಹತ್ತರ ಕೊಡುಗೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಧನ್ಯವಾದ ಸ್ವೀಕರಿಸಿ ಮಾತನಾಡಿನ ಅವರು “ದೇಶ ಸೇವೆ ನನ್ನ ಜೀವನದ ಅತ್ಯಂತ ಹೆಮ್ಮೆಯ ಕ್ಷಣ. ಈ ಗೌರವ ನನ್ನ ನಿವೃತ್ತ ಜೀವನದಲ್ಲೂ ದೇಶಸೇವೆಯ ನೆನಪುಗಳನ್ನು ಮತ್ತಷ್ಟು ಸ್ಮರಣೀಯವಾಗಿಸುತ್ತದೆ. ಓದು, ಉದ್ಯೋಗ, ಹಣ — ಇವು ಜೀವನದ ಒಂದು ಭಾಗ ಮಾತ್ರ. ಇಂದಿನ ಯುವ ಪೀಳಿಗೆ ದೇಶಕ್ಕಾಗಿ ಸೇವೆ ಸಲ್ಲಿಸುವ ಧ್ಯೇಯವನ್ನೂ ಹೃದಯದಲ್ಲಿ ಇಟ್ಟುಕೊಳ್ಳಬೇಕು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಿರ್ದೇಶಕ ಡಿಯಾನ್ ಮೊಂತೆರೋ ಮತ್ತು ಜನರಲ್ ಮ್ಯಾನೇಜರ್ ಸುಮನಾ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು