9:48 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

Chikkamagaluru | ಅಜ್ಜಂಪುರ: ಬೋನಿನ ಬಾಗಿಲು ತೆರೆಯಲು ಯತ್ನಿಸಿದ ಬೇಜವಾಬ್ದಾರಿ ಅಧಿಕಾರಿ: ದಾಳಿಗೆ ಮುಂದಾದ ಚಿರತೆ

16/08/2025, 18:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೋನಿನಲ್ಲಿ ಸೆರೆಯಾದ ಚಿರತೆ ಹತ್ತಿರದಿಂದ ನೋಡಲು ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಬಾಗಿಲು ಅರ್ಧ ತೆಗೆದಾಗ ಚಿರತೆ
ದಾಳಿಗೆ ಮುಂದಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.


ಅರಣ್ಯ ಇಲಾಖೆ ಅಧಿಕಾರಿಯ ಈ ನಡೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನಾರಾಯಣಪುರ ಗ್ರಾಮದಲ್ಲಿ ಹಲವು ದಿನಗಳಿಂದ ಚಿರತೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ-ಭಯ ಹುಟ್ಟಿಸಿತ್ತು. ಸ್ಥಳಿಯರು ಹೊಲ-ಹದ್ದೆ-ತೋಟಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದರು. ಮಕ್ಕಳು ಕೂಡ ಶಾಲೆಗೆ ಹೋಗಲು ಭಯಪಡುತ್ತಿದ್ದರು.


ಹಾಗಾಗಿ ಅರಣ್ಯ ಇಲಾಖೆಯವರು ನಾರಾಯಣಪುರ ಗ್ರಾಮದ ಶಿವಯ್ಯ ಎಂಬುವರ ಮನೆ ಬಳಿ ಬೋನಿಟ್ಟಿದ್ದರು. ಕಳೆದ ರಾತ್ರಿ 12 ಗಂಟೆ ಸುಮಾರಿಗೆ ಚಿರತೆ ಬೋನಿಗೆ ಬಿದ್ದಿತ್ತು. ಆದರೆ, ಇಂದು ಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಯಾಗಿದ್ದ ಬೋನಿನ ಬಾಗಿಲನ್ನ ಅರ್ಧ ತೆಗೆದು ಹುಚ್ಚಾಟ ಮೆರೆದಿದ್ದಾರೆ. ಚಿರತೆ ಭಯವಾಗಿ ದಾಳಿಗೆ ಯತ್ನಿಸಿದಾಗ ತಕ್ಷಣ ಬಾಗಿಲು ಹಾಕಿದ್ದಾರೆ. ಅಧಿಕಾರಿಗಳ ಈ ಹುಚ್ಚಾಟದ ವಿಡಿಯೋ ಸ್ಥಳಿಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಅಪಾಯಕಾರಿ ಪ್ರಾಣಿಯ ಜೊತೆ ಈ ರೀತಿ ಹುಚ್ಚಾಟ ಆಡುವ ಅಧಿಕಾರಿಗಳ ವಿರುದ್ಧ ಸ್ಥಳಿಯರು ಕೂಡ ಅಸಮಾಧಾನ ಹೊರ ಹಾಕಿದ್ದಾರೆ. ಈ ಘಟನೆಯಿಂದ ಅರಣ್ಯ ಇಲಾಖೆ ಸಿಬ್ಬಂದಿಗಳ ಕಾರ್ಯನಿರ್ವಹಣೆಯ ಬಗ್ಗೆ ಹಲವು ಪ್ರಶ್ನೆಗಳು ಉದ್ಭವಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು