2:23 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದ ಪ್ರಕರಣ: ಆರೋಪಿ ಬಂಧನ; 5 ಲಕ್ಷ ಮೌಲ್ಯದ ಸೊತ್ತು ವಶ

19/08/2025, 22:23

ಪುತ್ತೂರು(reporterkarnataka.com): ಚಿನ್ನದ ಸರ ಕಸಿದ ಆರೋಪಿಯನ್ನು ಬಂಧಿಸಿದ
ಉಪ್ಪಿನಂಗಡಿ ಠಾಣಾ ಪೊಲೀಸರು ಆರೋಪಿಯಿಂದ
5,05,000 ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಜೂನ್ 4ರಂದು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು, ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಬಲವಂತವಾಗಿ ಕಸಿದುಕೊಂಡು ಪರಾರಿಯಾಗಿದ್ದರು. ಪ್ರಕರಣ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 48-2025 ಕಲಂ 309(4)ಬಿ ಎನ್ ಎಸ್ ಅಡಿ ಪ್ರಕರಣ ದಾಖಲಿಸಲಾಗಿತ್ತು.
ಉಪ್ಪಿನಂಗಡಿ ಪೊಲೀಸರು ಈ ಬಗ್ಗೆ ತನಿಖೆ ನಡೆಸಲಾಗಿ ಆರೋಪಿ ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಎಂಬಾತನನ್ನು ಪುತ್ತೂರು, ನೆಕ್ಕಿಲಾಡಿ ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿತನಿಂದ ಅಂದಾಜು ರೂ 4,54,000/-ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ ಸೇರಿದಂತೆ, ಒಟ್ಟು 5,05,000 ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ. ಬೈಕ್ ಗೆ ಸಂಬಂಧಿಸಿ ಮೈಸೂರು ನಗರದ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.
ಆರೋಪಿ ಪತ್ತೆ ಕಾರ್ಯದಲ್ಲಿ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ಅವರ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್ ರವರ ನೇತೃತ್ವದಲ್ಲಿ, ಉಪ್ಪಿನಂಗಡಿ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಕಾರ್ಯಚರಣೆ ನಡೆಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು