12:19 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆ

20/08/2025, 19:50

ಮಂಗಳೂರು(reporterkarnataka.com): ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಅಧ್ಯಕ್ಷ ಸುರೇಂದ್ರ ಕಂಬಳಿ ಅವರ ಅಧ್ಯಕ್ಷತೆಯಲ್ಲಿ ಇಂದು ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿತು.
ಗೃಹಲಕ್ಷ್ಮೀ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ಪ್ರಸ್ತುತ 85044 ಫಲಾನುಭವಿಗಳು ನೋಂದಣಿಯಾಗಿದ್ದು ಈ ಈವರೆಗೆರೂ 305,04,48000 ಮಂಜೂರಾಗಿರುತ್ತದೆ ಎಂದು
ಮಂಗಳೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಮಾಹಿತಿ ನೀಡಿದರು.
ಮಂಗಳೂರು- ಗುರುಪುರ- ಕೈಕಂಬ- ಬಜ್ಪೆ ಮೂಲಕ ಕಟೀಲಿಗೆ ಮತ್ತು ವಾಮಂಜೂರು ಪರಾರಿ ಮೂಲಕ ಉಳಾಯಿಬೆಟ್ಟುಗೆ ಸರಕಾರಿ ಬಸ್ಸು ಸೇವೆ ಒದಗಿಸಿಕೊಡುವುದರ ಬಗ್ಗೆ ಸದಸ್ಯರು ಚರ್ಚಿಸಿದರು.
ರಾಜ್ಯ ಸರಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಈ ಬಗ್ಗೆ ಕರಪತ್ರವನ್ನು ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.
ತಾಲೂಕು ಪಂಚಾಯತ್ ಸಹಾಯಕ ಲೆಕ್ಕಧಿಕಾರಿ ಪರಮೇಶ್ವರ ಸ್ವಾಗತಿಸಿದರು. ತಾಲೂಕುಮಟ್ಟದ ಅನುಷ್ಟಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ ವಂದಿಸಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಸದಸ್ಯ ಅಲ್ ಸ್ಟನ್ ಡಿ ಕುನ್ಹ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಸದಸ್ಯರಾದ ರಾಜೇಶ್ ಶೆಟ್ಟಿ, ಪ್ರಶಾಂತ್ ಎಸ್, ನವಾಜ್, ಶೈಲಾ ನೀತಾ ಡಿ ಸೋಜಾ, ಮೊಹಮ್ಮದ್ ರಫೀಕ್, ರಿತೇಶ್ ಅಂಚನ್, ಜಯಂತಿ, ವಿದ್ಯಾ, ಡಿ.ಎಂ. ಮುಸ್ತಾಫ ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು, ತಾಪಂ ಅಧಿಕಾರಿಗಳು, ತಾಲೂಕು ಐಇಸಿ ಸಂಯೋಜಕಿ ನಿಶ್ಮಿತ.ಬಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು