1:54 PM Wednesday7 - October 2026
ಬ್ರೇಕಿಂಗ್ ನ್ಯೂಸ್
ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್

ಇತ್ತೀಚಿನ ಸುದ್ದಿ

ಧರ್ಮಸ್ಥಳ ಅರಣ್ಯದಲ್ಲಿ ಶವ ಹೂತಿದ್ದು ಸಾಬೀತಾದರೆ ಕ್ರಮ: ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ

20/08/2025, 21:23

ಬೆಂಗಳೂರು(reporterkarnataka.com): ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವ ಹೂತಿರುವುದು ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲು ಅರಣ್ಯದಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸಲು ಅವಕಾಶ ಇಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಅಥವಾ ಸಾರ್ವಜನಿಕ ಉದ್ದೇಶಕ್ಕೆ ಅರಣ್ಯ ಭೂಮಿ ಬಳಕೆ ಮಾಡಬೇಕಾದಲ್ಲಿ ನಿಯಮಾನುಸಾರ ತೀರುವಳಿ ಅನುಮತಿ (ಎಫ್.ಸಿ.) ಪಡೆಯಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಅರಣ್ಯದಲ್ಲಿ ಅಕ್ರಮವಾಗಿ ಶವ ಸಂಸ್ಕಾರ ಮಾಡಿರುವುದು ಈಗ ನಡೆಯುತ್ತಿರುವ ಎಸ್ಐಟಿ ತನಿಖೆಯಿಂದ ಸಾಬೀತಾದರೆ ನಿಯಮಾನುಸಾರ ಕ್ರಮ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು