1:39 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು

20/08/2025, 21:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಮುಟ್ಟಿದ್ದಕ್ಕೆ ಯುವಕನೊಬ್ಬನನ್ನು ಅಮಾನುಷವಾಗಿ ಹೊಡೆದು ಹತ್ಯೆ ಮಾಡಿದ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಕುಮಾರ್ (37) ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ.
ತಮ್ಮ ತೋಟದ ಕಾಯಿ ಮುಟ್ಡಿದ್ದಕ್ಕೆ ಹೊಡೆದು ಕೊಂದ ತೋಟದ ಮಾಲೀಕ ಮಧು (37) ಎಂಬಾತ ಕುಮಾರ್ ಅವರನ್ನು ಹೊಡೆದು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ.
ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ತೆಗೆದುಕೊಂಡು ಹೋಗಿರುವುದಕ್ಕೆ ಮಧು ಈ ಹಿಂದೆ ಸಾಕಷ್ಟು ಬಾರಿ ಕುಮಾರ್ ಗೆ ಎಚ್ಚರಿಕೆ ನೀಡಿದ್ದ ಎನ್ನಲಾಗಿದೆ. ನಿನ್ನೆ ಕೂಡ ತೆಂಗಿನಕಾಯಿ ತೆಗೆದುಕೊಂಡು ಹೋಗುವಾಗ ಗಲಾಟೆ ನಡೆದಿದೆ.
ತೋಟದ ಮಾಲೀಕ ಮಧುಗೆ ಕುಮಾರ್ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ಎನ್ನಲಾಗಿದ್ದು,ಇದರಿಂದ ಆಕ್ರೋಶಗೊಂಡ ಮಧು ಗುದ್ದಲಿಯಿಂದ ಕುಮಾರ್ ಮೇಲೆ ಹಲ್ಲೆ ಮಾಡಿದ್ದ ಎಂದು ತಿಳಿದು ಬಂದಿದೆ.ಹಲ್ಲೆಯಿಂದ ಕುಮಾರ್ ನಿತ್ರಾಣಗೊಂಡು ಅಲ್ಲೆ ಬಿದ್ದಿದ್ದನು. ತೀವ್ರ ರಕ್ತಸ್ರಾವದಿಂದ ನರಳುತ್ತಿದ್ದವನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಕುಮಾರ್ ಸಾವನ್ನಪ್ಪಿದ್ದಾನೆ. ಸಖರಾಯಪಟ್ಟಣ ಪೋಲಿಸರಿಂದ ಕೊಲೆ ಆರೋಪಿ ಮಧುವನ್ನು ಬಂಧಿಸಿದ್ದಾರೆ.ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು