10:06 PM Friday22 - August 2025
ಬ್ರೇಕಿಂಗ್ ನ್ಯೂಸ್
ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು… ಸಂಸೆ ಯುವಕ ಆತ್ಮಹತ್ಯೆ ಪ್ರಕರಣ: ಕುದುರೆಮುಖ ಪೊಲೀಸ್ ಕಾನ್ ಸ್ಟೇಬಲ್ ಸಿದ್ದೇಶ್ ಗೋವಾದಲ್ಲಿ…

ಇತ್ತೀಚಿನ ಸುದ್ದಿ

ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರಿಗೆ ಆಹ್ವಾನ: ಸಿಎಂ ಸಿದ್ದರಾಮಯ್ಯ

22/08/2025, 20:52

ಬೆಂಗಳೂರು(reporterkarnataka.com): ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, ಜಿಲ್ಲಾಡಳಿತದ ವತಿಯಿಂದ ಬಾನು ಮುಷ್ತಾಕ್ ಅವರನ್ನು ಗೌರವದಿಂದ ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಾನು ಮುಷ್ತಾಕ್ ಅವರ ಕೃತಿ ಎದೆಯ ಹಣತೆಗೆ ಬೂಕರ್ ಪ್ರಶಸ್ತಿ ದೊರೆತಿದ್ದು, ಕರ್ನಾಟಕದ ಲೇಖಕಿಗೆ ಈ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ರೈತ ಸಂಘ, ಕನ್ನಡ ಚಳವಳಿಯ ಜೊತೆಗೆ ಹೋರಾಟದ ಹಿನ್ನೆಲೆಯುಳ್ಳ ಬಾನು ಮುಷ್ತಾಕ್, ಪ್ರಗತಿಪರ ಚಿಂತಕರೂ ಆಗಿದ್ದಾರೆ ಎಂದರು.
ಈ ಬಾರಿ ಶಾಸ್ತ್ರದ ಪ್ರಕಾರ ಹನ್ನೊಂದು ದಿನ ದಸರಾ ನಡೆಯಲಿದೆ. ಅಕ್ಟೋಬರ್ 2 ರಂದು ವಿಜಯದಶಮಿ ಎಂದರು.

*ರಕ್ಷಣಾ ಸಚಿವರಿಗೆ ಪತ್ರ*
ಮೈಸೂರು ದಸರಾ ಸಂದರ್ಭದಲ್ಲಿ ವೈಮಾನಿಕ ಪ್ರದರ್ಶನಕ್ಕೆ ಅನುಮತಿ ದೊರೆತಿದ್ದು, ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರು ದಸರಾ ವೀಕ್ಷಣೆಗೆ ಆಗಮಿಸಬೇಕೆಂದು ಪತ್ರ ಬರೆದಿದ್ದೇನೆ ಎಂದರು.

*ಆ. 29ರಂದು ಪಾದಯಾತ್ರೆಯಲ್ಲಿ ಭಾಗಿ*
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಬಿಹಾರದಲ್ಲಿ ಮತಗಳ್ಳತನ ನಡೆದಿರುವುದನ್ನು ವಿರೋಧಿಸಿ 16 ದಿನಗಳ ಪಾದಯಾತ್ರೆಯನ್ನು ಕೈಗೊಂಡಿದ್ದು, ಈ ತಿಂಗಳ 29 ರಂದು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದರು.
ಲೋಕಸಭೆಯಲ್ಲಿ 30 ದಿನಗಳ ಕಾಲ ಜೈಲು ಶಿಕ್ಷೆಗೊಳಗಾದ ಪ್ರಧಾನ ಮಂತ್ರಿ ಮುಖ್ಯಮಂತ್ರಿಗಳನ್ನು ವಜಾ ಮಾಡುವ ಮಸೂದೆ ಬಗ್ಗೆ ಮಾತನಾಡಿ, ಮಸೂದೆಯನ್ನು ಸದನ ಸಮಿತಿಗೆ ಶಿಫಾರಸ್ಸು ಮಾಡಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು