10:39 AM Sunday18 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

Mangaluru | ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆ: ಕರಪತ್ರ ಬಿಡುಗಡೆ

23/08/2025, 15:56

ಮಂಗಳೂರು(reporterkarnataka.com): ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆಯು ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅವರ ಅಧ್ಯಕ್ಷತೆಯಲ್ಲಿ ಇಂದು ನಗರದಲ್ಲಿ ಜರುಗಿತು.
70ಕ್ಕೂ ಮಿಕ್ಕಿದ ಸದಸ್ಯರು ಸ್ವಯಂಸ್ಪೂರ್ತಿಯಿಂದ ಭಾಗವಹಿಸಿರುವುದು ಕಾರ್ಯಕ್ರಮದ ಹುಮ್ಮಸ್ಸನ್ನು ಹೆಚ್ಚಿಸಿದೆ.
ಕಾರ್ಯಕ್ರಮದ ವರ್ಣರಂಜಿತ ಕರಪತ್ರವನ್ನು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋ ಅವರು ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸ್ಟಾನಿ ಆಲ್ವಾರೀಸ್ ಅವರಿಗೆ ನೀಡುವ ಮೂಲಕ ಬಿಡುಗಡೆಗೊಳಿಸಿದರು. ಸೆಪ್ಟೆಂಬರ್ 11ರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ ಹಲವರು ಸಭೆಯಲ್ಲಿ ಮಾತನಾಡುವ ಮೂಲಕ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ಕೆಥೋಲಿಕ್ ಸಭಾದ ಅಧ್ಯಕ್ಷರಾದ ಸಂತೋಷ್ ಡಿಸೋಜ ಬಜಪೆ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ನಾಯಕರಾದ ಲಕ್ಷ್ಮಣ್, ಯೆನಪೋಯ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಡಾ.ಜೀವನ್ ರಾಜ್ ಕುತ್ತಾರ್, ಸಂತ ಅಲೋಶಿಯಸ್ ಕಾಲೇಜ್ ನ ಪ್ರಾಧ್ಯಾಪಕರಾದ ಫ್ಲೋರಾ ಕ್ಯಾಸ್ಟಲಿನೋ, ಸಾಮರಸ್ಯ ಮಂಗಳೂರು ಅಧ್ಯಕ್ಷರಾದ ಮಂಜುಳಾ ನಾಯಕ್, ಮಹಿಳಾ ಮುಖಂಡರಾದ ಸುಮತಿ ಎಸ್. ಹೆಗ್ಡೆ, ವೇದಿಕೆಯ ಪ್ರಮುಖರಾದ ಡೋಲ್ಫಿ ಡಿಸೋಜ ಅವರು ಉಪಸ್ಥಿತರಿದ್ದರು.*
ಕಾರ್ಯಕ್ರಮದಲ್ಲಿ ವೇದಿಕೆಯ ಪ್ರಮುಖರಾದ ಸ್ಟಾನಿ ಲೋಬೋ, ಡಾ ಕೃಷ್ಣಪ್ಪ ಕೊಂಚಾಡಿ, ಡಾ.ವಸಂತ ಕುಮಾರ್, ಕೆ ಕರಿಯ,ಎರಿಕ್ ಲೋಬೋ, ಫ್ಲೇವಿ ಕ್ರಾಸ್ತಾ ಅತ್ತಾವರ, ಮರ್ಲಿನ್ ರೇಗೋ, ಬಿ. ಎನ್‌. ದೇವಾಡಿಗ, ಮಿಥುನ್ ರಾಜ್ ಕುತ್ತಾರ್, ಅಶೋಕನ್ ಬೋಳಾರ, ಸಂತೋಷ್ ಡಿಸೋಜ ಪಂಜಿಮೊಗರು, ಸಮರ್ಥ್ ಭಟ್, ಗ್ರೆಟ್ಟಾ ಟೀಚರ್, ಎಸ್. ಎಲ್. ಪಿಂಟೋ,ಆಲ್ವಿನ್ ಡಿಸೋಜ, ಅಸುಂತ ಡಿಸೋಜ, ವಿದ್ಯಾ ಶೆಣೈ, ಜೆ ಇಬ್ರಾಹಿಂ ಜೆಪ್ಪು,ಹೆಝಲ್ ಟೀಚರ್,ಕ್ವೀನಿ‌ ಪರ್ಸಿ ಆನಂದ್, ಪುರುಷೋತ್ತಮ ಪೂಜಾರಿ, ಫ್ಲೋರಿನ್ ಡಿಸೋಜ, ಅರುಣ್ ಡಿಸೋಜ ಶಕ್ತಿನಗರ, ಸಂತೋಷ್ ಬಜಾಲ್, ಯೋಗೀಶ್ ಜಪ್ಪಿನಮೊಗರು,ಟೋನಿ ಪಿಂಟೊ, ಚರಣ್ ಶೆಟ್ಟಿ, ನವೀನ್ ಕೊಂಚಾಡಿ, ಫೆಲಿಕ್ಸ್ ಡಿಸೋಜ, ರಾಕೇಶ್ ಕುಂದರ್, ಓಸ್ವಾಲ್ಡ್ ಪುರ್ತಾಡೋ,ಜೇಮ್ಸ್ ಪ್ರವೀಣ್, ಕಮಲಾಕ್ಷ ಜಲ್ಲಿಗುಡ್ಡ,ರವೀಂದ್ರ ವಾಮಂಜೂರು, ಕ್ರಿಸ್ಟನ್ ಮೆನೇಜಸ್, ಶೇಖರ್ ವಾಮಂಜೂರು, ನಿತಿನ್ ಬಂಗೇರ ಯೆಯ್ಯಾಡಿ, ತಯ್ಯುಬ್ ಬೆಂಗರೆ, ರೆಹಮಾನ್ ಖಾನ್ ಕುಂಜತ್ತಬೈಲ್, ಜ್ಯೋತಿ, ಮಹಮ್ಮದ್ ಆಯೂಬ್ ಷಾ, ನೀತಾ ಡಿಸೋಜ, ಶೈಲಜಾ ರಾಜೇಶ್, ಕೃಷ್ಣ ಇನ್ನಾ ಮುಂತಾದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು