1:38 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪೂನಾ: ಕಾರ್ಕಳ ಮೂಲದ ಹೊಟೇಲ್ ಮಾಲೀಕನ ಹತ್ಯೆ; ಸಿಬ್ಬಂದಿಯಿಂದಲೇ ದುಷ್ಕೃತ್ಯ

27/08/2025, 09:41

ಪೂನಾ(reporterkarnataka.com): ಮಹಾರಾಷ್ಟ್ರದ ಪೂನಾದಲ್ಲಿ ಮಂಗಳವಾರ ರಾತ್ರಿ ನಡೆದ ಭೀಕರ ಘಟನೆಗೆ ಕಾರ್ಕಳ ಮೂಲದ ಹೋಟೇಲ್ ಮಾಲೀಕ ಬಲಿಯಾದರು.
ಹೋಟೇಲ್ ಸಿಬ್ಬಂದಿಯೊಬ್ಬನು ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಗದರಿಸಿದ ಮಾಲೀಕನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಹತ್ಯೆಯಾದವರು ಕಾರ್ಕಳ ತಾಲೂಕಿನ ಎಣ್ಣೆಹೊಳೆ ಕುಮೇರುಮನೆ ನಿವಾಸಿ ಸಂತೋಷ್ ಶೆಟ್ಟಿ (46) ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶ ಮೂಲದ ಹೋಟೇಲ್ ಸಿಬ್ಬಂದಿ ಕೆಲಸದ ಸಮಯದಲ್ಲಿ ಮದ್ಯಪಾನ ಮಾಡಿದ್ದಕ್ಕೆ ಸಂತೋಷ್ ಶೆಟ್ಟಿ ಬುದ್ಧಿವಾದ ಹೇಳಿದ ವೇಳೆ, ಆಕ್ರೋಶಗೊಂಡ ಸಿಬ್ಬಂದಿ ಕಿಚನ್‌ನಿಂದ ಕತ್ತಿಯಿಂದ ಶೆಟ್ಟಿಯವರ ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಘಟನೆ ಮಂಗಳವಾರ ರಾತ್ರಿ ಸುಮಾರು 10 ಗಂಟೆಗೆ ನಡೆದಿದೆ. ಈ ಶವವನ್ನು ಅಂತ್ಯಕ್ರಿಯೆಗಾಗಿ ಹುಟ್ಟೂರು ಎಣ್ಣೆಹೊಳೆಗೆ ತರಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು