12:56 PM Thursday28 - August 2025
ಬ್ರೇಕಿಂಗ್ ನ್ಯೂಸ್
ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ ಬದಲಾವಣೆ, ಪಾಸ್ ರದ್ದು

28/08/2025, 11:37

ಗಿರಿಧರ್ ಕೊಂಪುಳಿರ ಹಾಸನ

info.reporterkarnataka@gmail.com

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ಉತ್ಸವ ಈ ವರ್ಷ ಅಕ್ಟೋಬರ್ 9 ರಿಂದ 23ರವರೆಗೆ ನಡೆಯಲಿದೆ. ಹೀಗಾಗಿ ಹಾಸನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ದರ್ಶನೋತ್ಸವ ಸಿದ್ಧತೆ ಸಭೆ ಮಾಡಲಾಗಿದೆ. ಗಣ್ಯರು ಮತ್ತು ಭಕ್ತರ ದರ್ಶನದ ವ್ಯವಸ್ಥೆ ಕುರಿತು ಚರ್ಚೆ ಮಾಡಲಾಗಿದೆ.
ಅಧಿದೇವತೆ, ಬೇಡಿದ ವರವ ನೀಡುವ ಮಹಾತಾಯಿ, ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನಾಂಬೆ ಉತ್ಸವಕ್ಕೆ ಇದೀಗ ದಿನಗಣನೆ ಶುರುವಾಗಿದೆ. ಈ ವರ್ಷ ಅಕ್ಟೋಬರ್ 9 ರಿಂದ 23 ರವರೆಗೆ ಹಾಸನಾಂಬೆ ಉತ್ಸವ ಜರುಗಲಿದೆ. ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ ಉಳಿದ 13 ದಿನ ಭಕ್ತರಿಗೆ ಹಾಸನಾಂಬೆ ದರುಶನ ಕರುಣಿಸಲಿದ್ದಾಳೆ. ಹೀಗಾಗಿ ಹಾಸನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ದರ್ಶನೋತ್ಸವ ಸಿದ್ಧತೆ ಸಭೆ ನಡೆಯಿತು. ಶಾಸಕರಾದ ಸ್ವರೂಪ್, ಸಿಮೆಂಟ್ ಮಂಜು, ಶಿವಲಿಂಗೇಗೌಡ ಭಾಗಿಯಾಗಿದ್ದರು.
*ಭಕ್ತರಿಗೆ ಸಮಯ ನಿಗದಿ ಮಾಡುವಂತೆ ಸಚಿವ ಕೃಷ್ಣಬೈರೇಗೌಡ ಸಲಹೆ:*
ಸಭೆಯಲ್ಲಿ ಮಾತನಾಡಿದ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ, ರಾಜ್ಯದ ಮೂಲೆ ಮೂಲೆಯಿಂದ ಜನರು ಹಾಸನಾಂಬೆ ದರ್ಶನಕ್ಕೆ ಬರುತ್ತಾರೆ. ಆದರೆ ವಿವಿಐಪಿ, ವಿಐಪಿ ಭಕ್ತರ ಕಾರಣದಿಂದ ಜನರಿಗೆ ದರ್ಶನಕ್ಕೆ ಸಮಸ್ಯೆ ಆಗುತ್ತದೆ. ಅವರನ್ನು ಗಂಟೆಗಟ್ಟಲೇ ನಿಲ್ಲಿಸಿ ಜನರಿಗೆ ತೊಂದರೆ ಕೊಡುವುದು ಸರಿಯಲ್ಲ. ಹಾಗಾಗಿ ಈ ಗಣ್ಯ ಸಂಸ್ಕೃತಿ ತಡೆಯಲು ಸಹಕರಿಸಿ ಎಂದು ಮನವಿ ಮಾಡಿದರು.
ನಾನು ವಿಐಪಿ ಹಾಗೂ ಶಿಷ್ಟಾಚಾರ ಭಕ್ತರಿಗೆ ಸಮಯ ನಿಗದಿ ಮಾಡಿ ಎಂದು ಹೇಳಿದ್ದೆ. ಗೋಲ್ಡ್ ಕಾರ್ಡ್​ಗೆ ಎರಡು ಗಂಟೆ, ಶಿಷ್ಟಾಚಾರಕ್ಕೆ ಎರಡು ಗಂಟೆ ಮಾತ್ರ ಸಮಯ ನಿಗದಿ ಮಾಡಿ ಎಂದು ಸಲಹೆ ನೀಡಲಾಗಿದೆ. ಇದೆಲ್ಲ ಮಾಡಿದರೆ ಜನರಿಗೆ ಅನುಕೂಲ ಆಗುತ್ತೆ ಎನ್ನುವುದಾದರೆ ಈ ಎಲ್ಲಾ ರೀತಿಯ ಬದಲಾವಣೆ ಮಾಡೋಣ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

*ಪಾಸ್ ವ್ಯವಸ್ಥೆ ಸಂಪೂರ್ಣ ರದ್ದು:*
ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿ ಅಧಿಕಾರಿ ಮಾರುತಿ ಮಾತನಾಡಿ, ಹಾಸನಾಂಬೆ ಉತ್ಸವ ವೇಳೆ ದರ್ಶನದ ಪಾಸ್ ವ್ಯವಸ್ಥೆ ಸಂಪೂರ್ಣ ರದ್ದು ಮಾಡಲಾಗುವುದು. ಪಾಸ್ ಬದಲು ಗೋಲ್ಡ್ ಕಾರ್ಡ್ ಬಳಕೆ ಇರಲಿದ್ದು, ಒಂದು ಗೋಲ್ಡ್ ಕಾರ್ಡ್​ಗೆ ಒಬ್ಬರಿಗೆ ಮಾತ್ರ ದರ್ಶನಕ್ಕೆ ಅವಕಾಶವಿದ್ದು, ಮುಂಜಾನೆ 5ರಿಂದ ದರ್ಶನಕ್ಕೆ ಅವಕಾಶವಿರಲಿದೆ ಎಂದು ತಿಳಿಸಿದರು.
ಉಚಿತ ಪಾಸ್ ಪಡೆದು ದರ್ಶನಕ್ಕೆ ಬರುತ್ತಿದ್ದ ಜನರಿಂದ ಗೊಂದಲವಾಗುತ್ತಿತ್ತು. ಆದ್ದರಿಂದ ಉಚಿತ ಪಾಸ್ ಬದಲು ಕೇವಲ ಗೋಲ್ಡ್ ಕಾರ್ಡ್ ಬಳಕೆ ಮಾಡಲಾಗುವುದು. ಸಿಎಂ, ಡಿಸಿಎಂ, ಸಿಜೆ ಹೊರತುಪಡಿಸಿ ಉಳಿದ ಎಲ್ಲಾ ಗಣ್ಯರಿಗೆ ವೈಯಕ್ತಿಕ ಶಿಷ್ಟಾಚಾರ ಬದಲು ಜಿಲ್ಲಾಡಳಿತ ನಿಯೋಜಿತ ವಾಹನ ಬಳಕೆ ಮಾಡಲಾಗುವುದು. ಕೊನೆಯ 5 ದಿನ ಎಲ್ಲಾ ರೀತಿಯ ಶಿಷ್ಟಾಚಾರ ರದ್ದು ಎಂದು ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿ ಅಧಿಕಾರಿ ಮಾರುತಿ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು