ಇತ್ತೀಚಿನ ಸುದ್ದಿ
ಖೋಟಾ ನೋಟು ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
28/08/2025, 12:53

ಉಪ್ಪಿನಂಗಡಿ(reporterkarnataka.com): ಖೋಟಾ ನೋಟು ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಉಪ್ಪಿನಂಗಡಿ ಬಳಿ ಬಂಧಿಸಿದ್ದಾರೆ.
ಬಿ.ಸಿ ರೋಡ್ ನ ಜೋಡು ಮಾರ್ಗದ ತಲಪಾಡಿ ಹೌಸ್ ನಿವಾಸಿ ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಬಂಧಿತ ಆರೋಪಿ. ಈತನ ಮೇಲೆ 2023 ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದು ನಂತರ ಪ್ರಕರಣಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ಮೇಲೆ 8 ಬಾರಿ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿತ್ತು. ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ವಾರಂಟ್ ಜ್ಯಾರಿ ಸಿಬ್ಬಂದಿಗಳು ಈತನನ್ನು ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ ವಲಾಲು ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಮೇರೆಗೆ ಆಪಾದಿತನ ವಿರುದ್ಧ ಕಲಂ: 269 BNS-2023 ಪ್ರಕಾರ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.